ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 4,169 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಹಳೆಯ ಎಲ್ಲಾ ದಾಖಲೆಗಳು ಮುರಿದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 51,422ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 104 ಮಂದಿ ಕೋವಿಡ್ಗೆ ಬಲಿಯಾಗಿದ್ದು, ಕೊರೊನಾ ಸಾವಿನ ಸಂಖ್ಯೆ ಸಾವಿರದ ಗಡಿ ದಾಟಿ 1,032ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 1,263 ಮಂದಿ ಬಿಡುಗಡೆಯಾಗಿದ್ದು, ಈವರೆಗೆ 19,729 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 30,655 ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 539ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇಕಡಾ 38.37 ಇದೆ. ಮರಣ ಪ್ರಮಾಣ ಶೇಕಡಾ 2.01 ಇದೆ. 9, 25,477 ಒಟ್ಟು ಪರೀಕ್ಷೆ ನಡೆಸಲಾಗಿದ್ದು, ಇಂದು 23,451 ಮಂದಿಯ ಸೋಂಕು ಪರೀಕ್ಷೆ ನಡೆಸಲಾಗಿದೆ.
ಇನ್ನೂ ಬೆಂಗಳೂರಲ್ಲಿಯೇ ಒಂದೇ ದಿನ 2,344 ಜನರಿಗೆ ಕೊರೊನಾ ಹರಡಿದೆ. ಅಲ್ಲದೆ ಸೋಂಕಿತರ ಸಂಖ್ಯೆ 25,288ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 70 ಜನರು ಮೃತಪಟ್ಟಿರುವುದು ವರದಿಯಾಗಿದೆ. ನಗರದಲ್ಲಿ ಮೃತಪಟ್ಟವರ ಸಂಖ್ಯೆ 507ಕ್ಕೆ ಏರಿಕೆಯಾಗಿದೆ. ಇದೇ ವೇಳೆ 497 ಮಂದಿ ಬಿಡುಗಡೆಯಾಗಿದ್ದು, 18,828 ಸಕ್ರಿಯ ಪ್ರಕರಣಗಳಿವೆ.
ನಗರದಲ್ಲಿ ಚೇತರಿಕೆ ಪ್ರಮಾಣ ಶೇ. 23.54 ರಷ್ಟಿದ್ದು, ಮರಣ ಪ್ರಮಾಣ 2.0%ನಷ್ಟಿದೆ. ಬೆಂಗಳೂರಿನಲ್ಲಿ 2,344, ದಕ್ಷಿಣ ಕನ್ನಡದಲ್ಲಿ 238, ಧಾರವಾಡ 176, ವಿಜಯಪುರ 144, ಮೈಸೂರು 130, ಕಲಬುರಗಿ 123, ಉಡುಪಿ 113, ರಾಯಚೂರು 101, ಬೆಳಗಾವಿ 92, ಉತ್ತರ ಕನ್ನಡ 79, ಚಿಕ್ಕಬಳ್ಳಾಪುರ 77, ಬೀದರ್ 53, ಶಿವಮೊಗ್ಗ 46, ಬಳ್ಳಾರಿ 44, ಗದಗ 44, ಕೋಲಾರ 43, ಬಾಗಲಕೋಟೆ 39, ಯಾದಗಿರಿ 34, ಕೊಪ್ಪಳ 32, ಹಾಸನ 31, ಬೆಂಗಳೂರು.ಗ್ರಾ.31, ಚಿಕ್ಕಮಗಳೂರು 30, ದಾವಣಗೆರೆ 25, ಚಿತ್ರದುರ್ಗ 21, ಹಾವೇರಿ 18, ಕೊಡಗು 18, ಚಾಮರಾಜನಗರ 16, ತುಮಕೂರು 12, ಮಂಡ್ಯ 11, ರಾಮನಗರದಲ್ಲಿ ನಾಲ್ಕು ಸೇರಿ ಇಡೀ ರಾಜ್ಯದಲ್ಲಿ 4,169 ಜನರಿಗೆ ಸೋಂಕು ಹರಡಿದೆ.