ಬೆಂಗಳೂರು: ರಾಜ್ಯದಲ್ಲಿ ಇಂದು 23,150 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,425 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1,459 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು ಇಲ್ಲಿಯತನಕ 39,49,149 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್ಗೆ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 8,861ಕ್ಕೆ ಏರಿಕೆಯಾಗಿದೆ.
ಈ ಮೂಲಕ ಸೋಂಕಿತರ ಪ್ರಮಾಣ ಶೇ. 6.15 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 5.30 ರಷ್ಟಿದೆ. ಇಲ್ಲಿಯವರೆಗೂ ಪರಿಕ್ಷೀಸಲಾದ ಒಟ್ಟು ಸಂಖ್ಯೆ 67638495. ವಾರದ ಸಾವಿನ ಪ್ರಮಾಣ ಶೇ. 0.03 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 5,946 ಒಳಗಾಗಿದ್ದಾರೆ. ಇದುವರೆಗೂ 12,78,045 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1,198 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,29,306 ಕ್ಕೆ ಏರಿಕೆ ಆಗಿದೆ. ಇಂದು 1,241 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 18,04, 828 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಇನ್ನು ಸಕ್ರಿಯ ಪ್ರಕರಣಗಳು 7,504 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,973 ರಷ್ಟಿದೆ.
ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಜುಲೈ 26 ರಿಂದ ಆಗಸ್ಟ್ 31 ರವರೆಗೆ ಮಂಗಳೂರು - ಬೆಂಗಳೂರು ವಿಶೇಷ ರೈಲು ವ್ಯವಸ್ಥೆ
ಹುಬ್ಬಳ್ಳಿಯಲ್ಲಿ ವ್ಯಕ್ತಿ ಸಾವು: ಕೋವಿಡ್ ಸೋಂಕಿನಿಂದ ಹುಬ್ಬಳ್ಳಿಯ ಗಾಂಧಿನಗರದ 77 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಧುಮೇಹ,ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಕೂಡ ಅವರು ಬಳಲುತ್ತಿದ್ದರು. ಜುಲೈ 20 ರಂದು ಕೋವಿಡ್ ಸೋಂಕು ದೃಢಪಟ್ಟು ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 24 ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಜನತೆ ಸಾಮಾಜಿಕ ಅಂತರ, ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಇಂದು ಕೂಡ 17 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 5 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಕೊರೊನಾ ಇಂದು ಮತ್ತೊಂದು ಬಲಿ ಪಡೆದುಕೊಂಡಿದೆ.