ETV Bharat / state

ಹಿಜಾಬ್ ವಿವಾದ: ಬೆಂಗಳೂರಿನ ಶಾಲಾ-ಕಾಲೇಜುಗಳ ಸುತ್ತ ನಿಷೇಧಾಜ್ಞೆ ಮುಂದುವರಿಕೆ - ಬೆಂಗಳೂರು ಶಾಲಾ-ಕಾಲೇಜು ಸುತ್ತ ನಿಷೇಧಾಜ್ಞೆ

ಹಿಜಾಬ್​ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ-ಕಾಲೇಜುಗಳ ಸುತ್ತ 200 ಮೀಟರ್​​​​ವರೆಗೆ ವಿಧಿಸಿರುವ ನಿಷೇಧಾಜ್ಞೆಯನ್ನು ವಿಸ್ತರಿಸಿ ನಗರ ಪೊಲೀಸ್​ ಆಯುಕ್ತರು ಆದೇಶಿಸಿದ್ದಾರೆ.

144-section-continues-in-bengaluru-school-premises
ಹಿಜಾಬ್ ವಿವಾದ: ಬೆಂಗಳೂರಿನ ಶಾಲಾ-ಕಾಲೇಜು ಸುತ್ತ ನಿಷೇಧಾಜ್ಞೆ ಮುಂದುವರಿಕೆ
author img

By

Published : Mar 7, 2022, 10:30 PM IST

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ ಕಾಲೇಜುಗಳ ಸುತ್ತ 200 ಮೀಟರ್​​​​ವರೆಗೆ ಜನರು ಗುಂಪುಗೂಡದಂತೆ ವಿಧಿಸಿರುವ ನಿಷೇಧಾಜ್ಞೆಯನ್ನು ಮಾರ್ಚ್​ 22ರವರೆಗೆ ವಿಸ್ತರಿಸಿ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಕೆಲ‌ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ವಿಚಾರವು ಸಂಘರ್ಷಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಫೆಬ್ರವರಿ 9ರಂದು ಪೊಲೀಸ್​ ಆಯುಕ್ತರು 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದರು.

ಬೆಂಗಳೂರಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ‌ ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳ‌ ಮುಂದೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ‌ ಕಂಡುಬಂದರೆ‌ ಕ್ರಮ‌ ಕೈಗೊಳ್ಳಲಾಗುವುದು ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.