ಬೆಂಗಳೂರು: ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಗಲಭೆ ಪ್ರಕರಣಕ್ಕೆ ಸಬಂಧಿಸಿದಂತೆ ನಾಳೆ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಹೀಗಾಗಿ ನಗರದಲ್ಲಿ ಸಭೆ, ಪ್ರತಿಭಟನೆ, ಜನ ಗುಂಪು ಸೇರುವುದು, ಆಯುಧ, ಮಾರಕಾಸ್ತ್ರ ಒಯ್ಯುವುದನ್ನು ನಿಷೇಧಿಸಿ ಕಮೀಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕಳೆದ ರಾತ್ರಿಯಿಂದ ಸುಮಾರು 300ಕ್ಕೂ ಹೆಚ್ಚು ಜನ ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು 170ಮಂದಿಯನ್ನು ಅಧಿಕೃತವಾಗಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಗಲಭೆಯಲ್ಲಿ ಡಿ.ಜೆ. ಹಳ್ಳಿ 49 ಪೊಲೀಸರು ಮತ್ತು ಕೆ.ಜಿ. ಹಳ್ಳಿಯಲ್ಲಿ 13 ಪೊಲೀಸರು ಸೇರಿದಂತೆ ಒಟ್ಟು 78 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಡಿಸಿಪಿ ಅನುಚೇತ್ ಮಾಹಿತಿ ನೀಡಿದ್ದಾರೆ.