ETV Bharat / state

ಅನಧಿಕೃತ ಕಟ್ಟಡ ತೆರವು; 150 ಕೋಟಿ ರೂ. ಬೆಲೆಬಾಳುವ ಜಾಗ ಬಿಡಿಎ ವಶಕ್ಕೆ - ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಹೆಚ್ ಬಿ ಆರ್ ಬಡಾವಣೆಯ 1ನೇ ಹಂತ ಕಾಚರಕನಹಳ್ಳಿ ಸರ್ವೆ ನಂ. 181, 182 ಮತ್ತು 183ರಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡ ತೆರವುಗೊಳಿಸಿ, ಜಾಗ ವಶಕ್ಕೆ ಪಡೆದರು.

BDA got possession field
ಅನಧಿಕೃತ ಕಟ್ಟಡ ತೆರವುಗೊಳಿಸಿ ಜಾಗ ವಶಕ್ಕೆ ಪಡೆದ ಬಿಡಿಎ
author img

By ETV Bharat Karnataka Team

Published : Dec 30, 2023, 10:57 PM IST

ಬೆಂಗಳೂರು: ನಗರದಲ್ಲಿರುವ ಹೆಚ್ ಬಿ ಆರ್ ಬಡಾವಣೆಯ 1ನೇ ಹಂತ, ಕಾಚರಕನಹಳ್ಳಿ ಗ್ರಾಮದ ಸರ್ವೆ ನಂ. 181, 182 ಮತ್ತು 183ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅನಧಿಕೃತ ಕಟ್ಟಡಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ತೆರವುಗೊಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರ 1985ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಸುಮಾರು 150 ಕೋಟಿ ಬೆಲೆಬಾಳುವ 2.20 ಎಕರೆಯಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ 200 ಅಧಿಕಾರಿಗಳು, 100 ಜನ ಕಾರ್ಮಿಕರು ಹಾಗೂ 15 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಜಾಗೆಯನ್ನು ಪ್ರಾಧಿಕಾರದ ಸುಪರ್ದಿಗೆ ತೆಗೆದುಕೊಳ್ಳಲಾಯಿತು.

ಅನಧಿಕೃತ ಕಟ್ಟಡಗಳ ತೆರವು ಕಾರ್ಯದ ಮುನ್ನ ನೂತನವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡ ಎನ್. ಜಯರಾಂ ಅವರು, ಪ್ರಾಧಿಕಾರದ ಕಾನೂನು ಕೋಶದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಅಧಿಕಾರಿಗಳ ಸಲಹೆಗಳನ್ನು ಪಡೆದು ಹೆಚ್ ಬಿ ಆರ್ ಬಡಾವಣೆಯ 1ನೇ ಹಂತ, ಕಾಚರಕನಹಳ್ಳಿ ಗ್ರಾಮದ 2.20 ಎಕರೆಯಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಗಳ ತೆರವಿಗೆ ಸೂಚನೆ ನೀಡಿದ್ದರು.

ಇದನ್ನೂಓದಿ:ಹೊಸ ವರ್ಷಾಚರಣೆ; ಎಂಜಿ ರೋಡ್, ಬ್ರಿಗೇಡ್ ರೋಡ್​ಗೆ ಆಗಮಿಸುವವರಿಗೆ‌ ಪೊಲೀಸರ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.