ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದೆ. 1505 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 12 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಇದನ್ನೂ ಓದಿ: ರಾಜಧಾನಿ ಪ್ರವಾಸಿ ತಾಣಗಳು ಅನ್ಲಾಕ್ ಆದ್ರೂ ಲಾಕ್ ಆಗಿರುವ ಪ್ರವಾಸಿಗರ ಮೈಂಡ್ ಸೆಟ್!
ಸೋಂಕಿತರ ಒಟ್ಟು ಸಂಖ್ಯೆ 879560ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು 25316ಕ್ಕೆ ಏರಿಕೆಯಾಗಿವೆ. ಇಂದು 1067 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 842499 ಜನ ಗುಣಮುಖರಾಗಿದ್ದಾರೆ. ಮೃತಪಟ್ಟವರ ಒಟ್ಟು ಸಂಖ್ಯೆ 11726ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 409 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ 92.6 ಲಕ್ಷ ಕೋವಿಡ್ ಕೇಸ್.. ಶೇ.93ಕ್ಕೂ ಹೆಚ್ಚು ಸೋಂಕಿತರು ಗುಣಮುಖ
ಇಂದು ಬೆಂಗಳೂರಿನ 844 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 7 ಮಂದಿ ಮೃತಪಟ್ಟಿದ್ದಾರೆ. 367 ಮಂದಿ ಗುಣಮುಖರಾಗಿದ್ದಾರೆ.