ಬೆಂಗಳೂರು: ರಾಜ್ಯದಲ್ಲಿಂದು 1,630 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,78,055 ಕ್ಕೆ ಏರಿಕೆ ಆಗಿದೆ.
ಕೊರೊನಾಗೆ 19 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 11,714ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 1.33ರಷ್ಟು% ಹಾಗೂ ಸಾವಿನ ಪ್ರಮಾಣ ಶೇ 1.16% ರಷ್ಟು ಇದೆ. ಕೊರೊನಾದಿಂದ 1,333 ಸೋಂಕಿತರು ಗುಣಮುಖರಾಗಿದ್ದು ಈವರೆಗೆ 8,41,432 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 405 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 24,890 ಸಕ್ರಿಯ ಪ್ರಕರಣಗಳು ಇವೆ. ಕಳೆದ 7 ದಿನಗಳಲ್ಲಿ 34,917 ಜನರು ಹೋಂ ಕ್ವಾರೆಂಟೈನ್ನಲ್ಲಿ ಇದ್ದಾರೆ.
ಇನ್ನು ಸೋಂಕಿತರ ಸಂಪರ್ಕದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿ 1,32,300 ದ್ವಿತೀಯ ಸಂಪರ್ಕದಲ್ಲಿ 1,47,362 ಜನರು ಇದ್ದಾರೆ. ರಾಜ್ಯದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಖಾಸಗಿ ಲ್ಯಾಬ್ಗಳಲ್ಲಿ ಶೇ. 65 ರಷ್ಟು ಆಗಿದ್ದರೆ ಸರ್ಕಾರಿ ಲ್ಯಾಬ್ಗಳಿಂದ ಶೇ.35 ರಷ್ಟು ಸ್ಯಾಂಪಲ್ಸ್ ಟೆಸ್ಟ್ ಆಗಿದೆ. ಇಂದು 1,22,454 ರಷ್ಟು ಮಂದಿಗೆ ಕೊರೊನಾ ಪರೀಕ್ಷೆ ಮಾಡಿದ್ದು ಇದರಲ್ಲಿ 1,630 ಜನರಿಗೆ ಸೋಂಕು ದೃಢಪಟ್ಟಿದೆ.