ಬೆಂಗಳೂರು: ರಾಜ್ಯದಲ್ಲಿಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಕೊರೊನಾದಿಂದ 24 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,678ಕ್ಕೆ ಏರಿಕೆ ಆಗಿದೆ.19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.1.57ರಷ್ಟಿದ್ದು, ಸಾವಿನ ಪ್ರಮಾಣ ಶೇ.1.59 ರಷ್ಟು ಇದೆ.
ಕೊರೊನಾದಿಂದ 1645 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,38,150 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 438 ಸೋಂಕಿತರು ತೀವ್ರ ನಿಗಾಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಸದ್ಯ 24,708 ಸಕ್ರಿಯ ಪ್ರಕರಣಗಳು ಇವೆ. ಕಳೆದ 7 ದಿನಗಳಲ್ಲಿ 32,144 ಜನರು ಹೋಂ ಕ್ವಾರೆಂಟೈನ್ನಲ್ಲಿ ಇದ್ದಾರೆ. ಇನ್ನು ಸೋಂಕಿತರ ಸಂಪರ್ಕದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿ 1,42,169 ದ್ವಿತೀಯ ಸಂಪರ್ಕದಲ್ಲಿ 1,57,970 ಜನರು ಇದ್ದಾರೆ. ವಿಮಾನ ನಿಲ್ದಾಣದಲ್ಲಿ 2400 ಜನರ ತಪಾಸಣೆಗೊಳಪಟ್ಟಿದ್ದಾರೆ.
ಇನ್ನು ಬೆಂಗಳೂರಿನಲ್ಲಿಂದು 725 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,64,390ಕ್ಕೆ ಏರಿಕೆ ಆಗಿದೆ. 478 ಸೋಂಕಿತರು ಗುಣಮುಖರಾಗಿದ್ದು, 3,41,902 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 10 ಸೋಂಕಿತರು ಕೊರೊನಾಗೆ ಬಲಿಯಾಗಿದ್ದು, 4078ಕ್ಕೆ ಸಾವಿನ ಸಂಖ್ಯೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 18,409 ಇವೆ.