ETV Bharat / state

17 ಸಾವಿರ ಮಕ್ಕಳು ಮರಳಿ ಶಾಲೆಗೆ: ಹೈಕೋರ್ಟ್​ಗೆ ಸರ್ಕಾರದ ಮಾಹಿತಿ

ಶಾಲೆಯಿಂದ ಹೊರಗುಳಿದಿದ್ದ ಮಕ್ಕಳನ್ನು ಮರಳಿ ಶಾಲೆಗೆ ದಾಖಲಿಸಲಾಗಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಅಂಕಿಅಂಶಸಮೇತ ಮಾಹಿತಿ ನೀಡಿದೆ.

author img

By

Published : Feb 16, 2023, 9:59 PM IST

ಹೈಕೋರ್ಟ್
ಹೈಕೋರ್ಟ್

ಬೆಂಗಗಳೂರು: ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದಿರುವ 24 ಸಾವಿರಕ್ಕೂ ಅಧಿಕ ಮಕ್ಕಳ ಪೈಕಿ 21,407 ಮಕ್ಳಳನ್ನು ಗುರುತಿಸಲಾಗಿದೆ. 6 ವರ್ಷದಿಂದ 14 ವರ್ಷದೊಳಗಿನ 17,266 ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ವಿಚಾರವಾಗಿ 2013ರಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್​ ಎಸ್​.ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಶಾಲಾ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್ ಸಲ್ಲಿಸಿದ ಪ್ರಮಾಣ ಪತ್ರವನ್ನು ಸರ್ಕಾರಿ ವಕೀಲರಾದ ಪ್ರತಿಮಾ ಹೊನ್ನಾಪುರ ಅವರು ನ್ಯಾಯಪೀಠಕ್ಕೆ ಸಲ್ಲಿಸಿದರು. 2022ರ ನ.8 ರಂದು ಹೈಕೋರ್ಟ್ ನೀಡಿರುವ ನಿರ್ದೇಶನದಂತೆ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಲು ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಗಳು ಸಮೀಕ್ಷೆ ನಡೆಸಲಾಗಿದೆ. ಸರ್ವೇಯಿಂದ ರಾಜ್ಯದಲ್ಲಿ ಒಟ್ಟು 24,308 ಮಕ್ಕಳು ಶಾಲೆಯಿಂದ ಹೊರಗುಳಿದಿರುವ ವಿಚಾರ ತಿಳಿದು ಬಂದಿತ್ತು. ಅದರಲ್ಲಿ 21,408 ಮಕ್ಕಳನ್ನು ಗುರುತಿಸಲಾಗಿದೆ. ಇನ್ನೂ 2,901 ಮಕ್ಕಳನ್ನು ಗುರುತಿಸಬೇಕಿದೆ. ವಿಳಾಸ ಮತ್ತು ಫೋನ್ ನಂಬರ್ ತಪ್ಪಾಗಿ ನೀಡಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 2,254 ಮಕ್ಕಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಅಲ್ಲದೆ, 6ರಿಂದ 14 ವರ್ಷ ವಯೋಮಿತಿಯ ಒಟ್ಟು 17,266 ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ. 1,813 ಮಕ್ಕಳು ವಲಸೆ ಹೋಗಿದ್ದಾರೆ. 259 ಮಕ್ಕಳು ಅನಾರೋಗ್ಯ ಪೀಡಿತರಾಗಿದ್ದಾರೆ. ಮುಕ್ತ ಶಾಲೆಗೆ 29 ಹಾಗೂ ಮದರಸಾಕ್ಕೆ 120 ಮಕ್ಕಳನ್ನು ದಾಖಲಿಸಲಾಗಿದೆ. 127 ಮಕ್ಕಳು ಸಾವನ್ನಪ್ಪಿದ್ದಾರೆ. 37 ಮಕ್ಕಳು 6 ವರ್ಷಕ್ಕಿಂತ ಕಡಿಮೆ ವಯೋಮಾನದವರು. 1,756 ಮಕ್ಕಳು 14 ವರ್ಷ ಮೀರಿದವರು ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ. ಅಲ್ಲದೆ, 3ರಿಂದ 6 ವರ್ಷ ವಯೋಮಿತಿಯ 5,19,369 ಮಕ್ಕಳು ಅಂಗನವಾಡಿ ಕೇಂದ್ರಗಳಿಗೆ ದಾಖಲಾಗಿದ್ದಾರೆ. 51,084 ಮಕ್ಕಳು ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಾಖಲಾಗಿದ್ದಾರೆ. 7,747 ಮಕ್ಕಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ವಲಸೆ ಹೋಗಿದ್ದಾರೆ.

11,174 ಮಕ್ಕಳು 6 ವರ್ಷ ಮೀರಿದ್ದು, ಅದರಲ್ಲಿ 211 ಮಕ್ಕಳು ಎರಡು ಕೇಂದ್ರಗಳಲ್ಲಿ ನೋಂದಣಿಯಾಗಿದ್ದಾರೆ. 149 ಮಕ್ಕಳು ಮೃತಪಟ್ಟಿದ್ದಾರೆ. 987 ಮಕ್ಕಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವರದಿಯಲ್ಲಿ ತಪ್ಪಾಗಿ ನಮೂದಿಸಲಾಗಿದೆ. 72 ಮಕ್ಕಳು ಪತ್ತೆಯಾಗಿಲ್ಲ ಎಂದು ಪ್ರಮಾಣಪತ್ರದಲ್ಲಿ ಸರ್ಕಾರ ನ್ಯಾಯಪೀಠಕ್ಕೆ ವಿವರಣೆ ನೀಡಿತು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.

ಇದನ್ನೂ ಓದಿ: ಕಳಪೆ ಗುಣಮಟ್ಟದ ಔಷಧ ಮಾರಾಟ: ಸಂಸ್ಥೆ, ಪಾಲುದಾರರ ವಿರುದ್ಧ ಪ್ರಕರಣ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.