ಬೆಂಗಳೂರು: ರಾಜ್ಯಕ್ಕಿಂದು 2 ಲಕ್ಷ ಕೋವಿಶೀಲ್ಡ್ ಲಸಿಕೆ ಆಗಮನವಾಗಲಿದ್ದು, ಸರ್ಕಾರದ ನೇರ ಖರೀದಿ ಪ್ರಕ್ರಿಯೆ ಅಡಿ ಲಸಿಕೆ ಬರುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಹಾಗೇ ಆನಂದರಾವ್ ವೃತ್ತದಲ್ಲಿರುವ ರಾಜ್ಯ ಲಸಿಕಾ ಉಗ್ರಾಣದಲ್ಲಿ ದಾಸ್ತಾನು ಮಾಡಲಾಗುತ್ತಿದೆ. ಪ್ರತಿ ಡೋಸ್ನಲ್ಲಿ 0.5 ಎಂಎಲ್ ಪ್ರಮಾಣವಿರುತ್ತದೆ. ಒಂದು ವೈಲ್ನಲ್ಲಿ 10 ಮಂದಿಗೆ ಲಸಿಕೆ ನೀಡಬಹುದು. ಲಸಿಕೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ. ಅಂದಹಾಗೇ ರಾಜ್ಯ ಸರ್ಕಾರವು 2 ಕೋಟಿ ಕೋವಿಶೀಲ್ಡ್, 1 ಕೋಟಿ ಕೋವಾಕ್ಸಿನ್ ಖರೀದಿಗೆ ಆರ್ಡರ್ ಮಾಡಿತ್ತು. ಆದರೆ, 2 ಲಕ್ಷ ಕೋವಿಶೀಲ್ಡ್ ಲಸಿಕೆ ಇಂದು ಬಂದಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಲಸಿಕೆ ಸರಬರಾಜು ಆಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.