ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆ ಏಪ್ರಿಲ್, ಮೇ ಎರಡು ತಿಂಗಳ ಪಡಿತರ ಹಂಚಿಕೆ ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ನಿರ್ಧರಿಸಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಸೂಚಿಸಿದ್ದಾರೆ.
ಇಲ್ಲಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎರಡು ತಿಂಗಳ 70 ಕೆಜಿ ಅಕ್ಕಿ ಮತ್ತು 4 ಕೆಜಿ ಗೋದಿ ವಿತರಣೆ ಮಾಡಲಾಗುವುದು. ಏಪ್ರಿಲ್ ಮೊದಲ ವಾರದಲ್ಲಿ ಎರಡೂ ತಿಂಗಳ ಪಡಿತರ ವಿತರಣೆ ನೀಡಲು ಸೂಚಿಸಲಾಗಿದೆ. ಬಿಪಿಎಲ್ ಕಾರ್ಡ್ನವರಿಗೆ 10 ಕೆಜಿ ಅಕ್ಕಿ ಮತ್ತು 4 ಕೆಜಿ ಗೋದಿ, ಅಂತ್ಯೋದಯ ಕಾರ್ಡ್ನವರಿಗೆ 70 ಕೆಜಿ ಅಕ್ಕಿ ವಿತರಣೆ ಮಾಡಲಾವುದು ಎಂದು ತಿಳಿಸಿದರು.
ಸೋಮವಾರ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೂ ಎಲ್ಲ ಪಡಿತರ ಅಂಗಡಿಗಳು ತೆರೆದಿರುತ್ತವೆ. ಯುಗಾದಿ ರಜೆ ದಿನ ಮಂಗಳವಾರವೂ ಪಡಿತರ ಅಂಗಡಿ ತೆರೆದಿರುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.
500 ಅಂಗಡಿಗಳ ಮೇಲೆ ದಾಳಿ: ರಾಜ್ಯದ ಸುಮಾರು 500 ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ರಕರಣ ದಾಖಲು ಮತ್ತು ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು. ಎಂಆರ್ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ದಾಳಿ ನಡೆಸಲಾಗಿತ್ತು ಎನ್ನಲಾಗಿದೆ.
ಡ್ರಗ್ ಕಂಟ್ರೋಲರ್ಸ್, ಆಹಾರ, ನಾಗರಿಕ ಪೂರೈಕೆ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 500 ಅಂಗಡಿಗಳ ಮೇಲೆ ದಾಳಿ ಮಾಡಿ, 203 ಮೊಕದ್ದಮೆಗಳನ್ನು ದಾಖಲಿಸಿದೆ. ₹ 6,83,500 ದಂಡ ವಸೂಲು ಮಾಡಲಾಗಿದೆ. ಮಾಸ್ಕ್, ಸ್ಯಾನಿಟೈಸರ್ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಎಂಆರ್ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದ್ದ ಹಿನ್ನೆಲೆ ದಾಳಿ ನಡೆಸಿದ್ದಾಗಿ ತಿಳಿಸಿದರು.