ದೇವನಹಳ್ಳಿ : ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಲಗೇಜ್ಗಳನ್ನ ತಪಾಸಣೆ ಮಾಡಿದಾಗ ಆತನ ಸೂಟ್ ಕೇಸ್ನಲ್ಲಿ 20 ವಿಷಕಾರಿ ಕಿಂಗ್ ಕೋಬ್ರಾಗಳು ಪತ್ತೆಯಾಗಿವೆ. ಹೆಬ್ಬಾವು, ಕೋತಿಗಳು ಸೇರಿದಂತೆ ಒಟ್ಟು 78 ಪ್ರಾಣಿಗಳು ಪತ್ತೆಯಾಗಿವೆ.
ಸೆಪ್ಟೆಂಬರ್ 6 ರಂದು ಬ್ಯಾಂಕಾಕ್ನಿಂದ ದೇವನಹಳ್ಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ರಾತ್ರಿ 10:30ಕ್ಕೆ ಫ್ಲೈಟ್ ನಂ. ಎಫ್ಡಿ 137 ಏರ್ ಏಷ್ಯಾ ವಿಮಾನದಲ್ಲಿ ಬಂದ ಪ್ರಯಾಣಿಕನ ಲಗೇಜ್ ಗಳನ್ನ ಪರಿಶೀಲನೆ ಮಾಡಿದಾಗ ಸೂಟ್ ಕೇಸ್ನಲ್ಲಿ 17 ಜೀವಂತ ಕಿಂಗ್ ಕೋಬ್ರಾಗಳು ಪತ್ತೆಯಾಗಿದೆ. ಜೊತೆಗೆ 55 ಬಾಲ್ ಹೆಬ್ಬಾವುಗಳು ಪತ್ತೆಯಾಗಿದೆ. 6 ಕಪುಚಿನ್ ಮಂಗಗಳು ಸತ್ತಿರುವುದು ಕಂಡುಬಂದಿದೆ. ಒಟ್ಟು 78 ಪ್ರಾಣಿಗಳನ್ನ ಪ್ರಯಾಣಿಕ ಅಕ್ರಮವಾಗಿ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
-
#IndianCustomsAtWork A case of Wildlife smuggling was booked by Bengaluru Air Customs on 6th Sep, 2023 at KIAL Bengaluru. Animals found alive have been deported to country of origin and 6 dead Capuchin monkeys were disposed. Further investigation under progress. pic.twitter.com/NoM0XTkcjq
— Bengaluru Customs (@blrcustoms) September 7, 2023 " class="align-text-top noRightClick twitterSection" data="
">#IndianCustomsAtWork A case of Wildlife smuggling was booked by Bengaluru Air Customs on 6th Sep, 2023 at KIAL Bengaluru. Animals found alive have been deported to country of origin and 6 dead Capuchin monkeys were disposed. Further investigation under progress. pic.twitter.com/NoM0XTkcjq
— Bengaluru Customs (@blrcustoms) September 7, 2023#IndianCustomsAtWork A case of Wildlife smuggling was booked by Bengaluru Air Customs on 6th Sep, 2023 at KIAL Bengaluru. Animals found alive have been deported to country of origin and 6 dead Capuchin monkeys were disposed. Further investigation under progress. pic.twitter.com/NoM0XTkcjq
— Bengaluru Customs (@blrcustoms) September 7, 2023
ಬ್ಯಾಗ್ನಲ್ಲಿ ಹೆಬ್ಬಾವು, ಕಾಂಗರೂ ಸೇರಿ ಕಾಡು ಪ್ರಾಣಿಗಳ ಕಳ್ಳಸಾಗಣೆ : ಅಳಿವಿನಂಚಿನಲ್ಲಿರುವ ಕಾಡು ಪ್ರಾಣಿಗಳನ್ನು ಎರಡು ಟ್ರಾಲಿ ಬ್ಯಾಗ್ಗಳಲ್ಲಿ ಕಳ್ಳ ಸಾಗಣೆ ಮಾಡುತ್ತಿರುವುದನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಪತ್ತೆ (ಆಗಸ್ಟ್ 23-2023) ಹಚ್ಚಿದ್ದರು. ಪ್ರಯಾಣಿಕನನ್ನು ಬಂಧಿಸಿರುವ ಅಧಿಕಾರಿಗಳು, 234 ಕಾಡು ಪ್ರಾಣಿಗಳನ್ನು ಸಂರಕ್ಷಣೆ ಮಾಡಿದ್ದರು.
ಹೆಬ್ಬಾವು : ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 21ರ ರಾತ್ರಿ ಬ್ಯಾಂಕಾಕ್ನಿಂದ ಬಂದ ವಿಮಾನ ಸಂಖ್ಯೆ ಎಫ್ ಡಿ-137ರಲ್ಲಿ ಪ್ರಯಾಣಿಕ ಬಂದಿಳಿದಿದ್ದ. ಪ್ರಯಾಣಿಕ ಗ್ರೀನ್ ಚಾನಲ್ ದಾಟಿ ಏರ್ಪೋರ್ಟ್ನ ಆಗಮನ ಪ್ರದೇಶದ ನಿರ್ಗಮನ ದ್ವಾರದ ಕಡೆಗೆ ಬರುತ್ತಿದ್ದ ಸಮಯದಲ್ಲಿ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಡೆದು ತಪಾಸಣೆ ನಡೆಸಿದ್ದರು. ಆಗ ಎರಡು ಟ್ರಾಲಿ ಬ್ಯಾಗ್ಗಳಲ್ಲಿ ಕಾಡು ಪ್ರಾಣಿಗಳನ್ನು ಸಾಗಿಸುತ್ತಿರುವುದು ಕಂಡು ಬಂದಿತ್ತು. ಅದರಲ್ಲಿ ಒಂದು ಟ್ರಾಲಿ ಬ್ಯಾಗ್ಗೆ ಆತ ಅನುಮತಿಯನ್ನೇ ಪಡೆದಿರಲಿಲ್ಲ ಎಂದು ಗೊತ್ತಾಗಿತ್ತು. ಕಸ್ಟಮ್ಸ್ ಆಕ್ಟ್, 1962 ರ ಸೆಕ್ಷನ್ 104 ರ ಪ್ರಕಾರ ಪ್ರಯಾಣಿಕನನ್ನು ಬಂಧಿಸಲಾಗಿತ್ತು ಮತ್ತು ರಕ್ಷಿಸಲಾದ ಕಾಡು ಪ್ರಾಣಿಗಳನ್ನು ಕಸ್ಟಮ್ಸ್ ಆಕ್ಟ್, 1962ರ ಸೆಕ್ಷನ್ 110 ರ ಅಡಿ ವಶಪಡಿಸಿಕೊಳ್ಳಲಾಗಿತ್ತು. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂಬುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದರು.
ಇದನ್ನೂ ಓದಿ: ಬ್ಯಾಗ್ನಲ್ಲಿ ಹೆಬ್ಬಾವು, ಕಾಂಗರೂ ಸೇರಿ ಕಾಡು ಪ್ರಾಣಿಗಳ ಕಳ್ಳಸಾಗಣೆ: ಕಸ್ಟಮ್ಸ್ನಿಂದ 234 ವನ್ಯಜೀವಿಗಳ ರಕ್ಷಣೆ