ಬೆಂಗಳೂರು : ಸರ್ಕಾರ ಕೊಟ್ಟ ಟಾರ್ಗೆಟ್‌ನ ಈಗಾಗಲೇ ಮುಟ್ಟಿದ್ದೇವೆ. ಈ ತಿಂಗಳಾಂತ್ಯದಲ್ಲಿ ಇನ್ನು 200 ರಿಂದ 300 ಕೋಟಿ ರೂ. ಹೆಚ್ಚಿನ ಆದಾಯ ಬರುವ ನಿರೀಕ್ಷೆ ಇದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವರ್ಷ 22,700 ಕೋಟಿ ರೂ. ಗುರಿ ಇತ್ತು. ಅದು ಐದು ದಿನಗಳ ಹಿಂದೆಯೇ ಆಗಿದೆ. ಇನ್ನು, ಸಿಎಲ್ 7 ಮತ್ತು ಎಂಎಸ್ಐಎಲ್ಗೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ನಗರ ಸೇರಿ ಅನೇಕ ಕಡೆ ಗಾಂಜಾ ಬೆಳೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರ ಜತೆ ಚರ್ಚಿಸಿ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ. ಗಾಂಜಾ, ಅಫೀಮು ಸೇರಿ ಮಾದಕ ವಸ್ತು ಮಾರಾಟದ ವಿರುದ್ಧ ಈಗಾಗಲೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಪೊಲೀಸರ ಜತೆ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಅಬಕಾರಿ ಇಲಾಖೆಗೆ ವಾಹನ ಖರೀದಿ : ಅಬಕಾರಿ ಇಲಾಖೆಗೆ ಏಪ್ರಿಲ್ನಲ್ಲಿ 77 ಜೀಪ್ಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ. ಇನ್ಸ್ಪೆಕ್ಟರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅವರಿಗೆ 300 ಬೈಕ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರತಿ ಡಿಸಿ ಕಚೇರಿಗೆ 4 ರಿವಾಲ್ವಾರ್ ನೀಡಲು ತೀರ್ಮಾನಿಸಲಾಗಿದ್ದು, ಇದಕ್ಕೆಲ್ಲಾ ಅನುದಾನ ಇದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಹೇಳಿದರು.
ಸಿಡಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಲು ನಕಾರ : ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಬೆಂಲಿಸುವಿರಾ ಎಂಬ ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೋಪಾಲಯ್ಯ, ಈಗ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ನಾನು ಅವರ ಪರವಾಗಿ ನಿಲ್ಲುತ್ತೇನೆ. ಆದರೆ, ನಾನು ರಾಜಕೀಯದಲ್ಲಿ ಇನ್ನೂ ಚಿಕ್ಕವನು. ಆ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಇದನ್ನೂ ಓದಿ.. ಯುವತಿ ಈಗಾಗಲೇ ಕೋರ್ಟ್ ಹಾಲ್ನಲ್ಲಿದ್ದಾಳೆ: ಯುವತಿ ಪರ ವಕೀಲ ಜಗದೀಶ್ ಹೇಳಿಕೆ