ETV Bharat / state

ಗೊರಗುಂಟೆ ಪಾಳ್ಯ ಜಂಕ್ಷನ್​ ಸಿಗ್ನಲ್ ಫ್ರೀ ಕಾರಿಡಾರ್​ಗೆ 2,000 ಕೋಟಿ ರೂ. ವೆಚ್ಚ: ಬಿಬಿಎಂಪಿ ಆಯುಕ್ತ - ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ

ಗೊರಗುಂಟೆಪಾಳ್ಯ ಜಂಕ್ಷನ್ ಅನ್ನು ಸಿಗ್ನಲ್ ಫ್ರೀ ಕಾರಿಡಾರ್ ಮಾಡಲು ಸುಮಾರು 2,000 ಕೋಟಿ ರೂ. ವೆಚ್ಚದಲ್ಲಿ ಮಹತ್ವಾಕಾಂಕ್ಷೆಯ ಕಾರಿಡಾರ್ ಅಭಿವೃದ್ಧಿ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ಗೊರಗುಂಟೆ ಪಾಳ್ಯ ಜಂಕ್ಷನ್​ ಸಿಗ್ನಲ್ ಫ್ರೀ ಕಾರಿಡಾರ್​

author img

By

Published : Feb 13, 2021, 4:40 AM IST

ಬೆಂಗಳೂರು: ಬಿಬಿಎಂಪಿ‌ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಮಕೂರು ಮುಖ್ಯರಸ್ತೆ, ಹೊರವರ್ತುಲ ಬಳ್ಳಾರಿ ರಸ್ತೆಯ ಕೂಡು ರಸ್ತೆಯಾದ ಗೊರಗುಂಟೆಪಾಳ್ಯ ವೃತ್ತದ ಸಿಗ್ನಲ್ ಫ್ರೀ ಕಾರಿಡಾರ್‌ ಮಾಡುವ ಯೋಜನೆ ಜಾರಿಯ ಬಗ್ಗೆ ಶಾಸಕ ಮುನಿರತ್ನ, ಬಿಬಿಎಂಪಿ ಆಡಳಿತಗಾರ ಗೌರವ್ ಗುಪ್ತಾ, ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತ ನಾಗರಾಜ್, ರಸ್ತೆಯ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಇಂಜಿನಿಯರ್ ಪ್ರಹ್ಲಾದ್, ರಾಜರಾಜೇಶ್ವರಿ ನಗರ ವಲಯದ ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಗೊರುಗುಂಟೆಪಾಳ್ಯ ಜಂಕ್ಷನ್ ಮೂಲಕ ನಗರಕ್ಕೆ ರಾಜ್ಯದ ಶೇ 70ರಷ್ಟು ವಾಹನಗಳು ಸಂಚರಿಸುತ್ತವೆ. ಈ ಭಾಗದ ಸಂಚಾರ ದಟ್ಟಣೆ ತಡೆಗಟ್ಟುವ ಉದ್ದೇಶದಿಂದ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಯನ್ನ ಜಾರಿಗೊಳಿಸಲು ಮುಂದಾಗಲಾಗಿದೆ ಎಂದು ಶಾಸಕ ಮುನಿರತ್ನ ತಿಳಿಸಿದರು.

ನಿತ್ಯವೂ ಈ ಭಾಗದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗಲಿದ್ದು, ವಾರದ ಕೊನೆಯ ಎರಡು ದಿನ ಸೂಮಾರು 3 ಗಂಟೆಗಳ ಕಾಲ ಸಂಚಾರ ದಟ್ಟಣೆಯಾಗಲಿದೆ. ಒಂದು ಸಿಗ್ನಲ್ ಬಳಿ 1,000ಕ್ಕೂ ಹೆಚ್ಚು ವಾಹನಗಳು ನಿಲ್ಲಲಿದ್ದು, ನಾಗರಿಕರಿಗೆ ಹೆಚ್ಚು ಸಮಸ್ಯೆಯಾಗುತ್ತಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸಿದ್ದು, ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಗೆ ರಾಜ್ಯ ಸರ್ಕಾದ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ಕೋರಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹೊಸ ಮದ್ಯದಂಗಡಿಗೆ ಲೈಸನ್ಸ್​​ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ: ಸಚಿವ ಗೋಪಾಲಯ್ಯ

ಆಡಳಿತಗಾರ ಗೌರವ್ ಗುಪ್ತಾ ಮಾತನಾಡಿ, ತುಮಕೂರು ರಸ್ತೆಯ ಗೊರುಗುಂಟೆಪಾಳ್ಯ ಜಂಕ್ಷನ್ ನಗರದ ಪ್ರಮುಖ ದ್ವಾರವಾಗಿದ್ದು, ಸದರಿ ಜಂಕ್ಷನ್‌ನಲ್ಲಿ ಸಂಚಾರದಟ್ಟಣೆ ತಡೆಯಲು ಮತ್ತು ಸುತ್ತಮುತ್ತಲಿನ ಪ್ರಮುಖ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ ರೂಪಸಲಾಗಿರುತ್ತದೆ. ಇದೊಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಾಗುವ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಮುಖವಾದ ಹೆಜ್ಜೆಯಾಗಿದೆ.. ರಾಜ್ಯ ಸರ್ಕಾರದ ಸಹಭಾಗಿತ್ವದೊಂದಿಗೆ ಯೋಜನೆಯನ್ನು ಜಾರಿಗೊಳಿಸಿ ನಾಗರಿಕರಿಗೆ ಅನುಕೂಲವಾಗುವಂತೆ ಮಾಡಲಾಗುವುದು ಎಂದರು.

ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾತನಾಡಿ, ಗೊರುಗುಂಟೆಪಾಳ್ಯ ಜಂಕ್ಷನ್ ಬೆಂಗಳೂರಿಗೆ ಪ್ರಮುಖ ಹೆಬ್ಬಾಗಿಲಾಗಿದೆ. ಈ ಜಂಕ್ಷನ್ ಮೂಲಕ ತುಮಕೂರು ರಸ್ತೆ, ಮೈಸೂರು ರಸ್ತೆ, ಹೊಸೂರು ರಸ್ತೆ, ಹಳೇ ಮದ್ರಾಸ್ ರಸ್ತೆ, ಬಳ್ಳಾರಿ ರಸ್ತೆ ಹಾಗೂ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್ ಆಗಿದೆ. ಈ ಸಂಬಂಧ ಗೊರಗುಂಟೆಪಾಳ್ಯ ಜಂಕ್ಷನ್ ಅನ್ನು ಸಿಗ್ನಲ್ ಫ್ರೀ ಕಾರಿಡಾರ್ ಮಾಡಲು ಸುಮಾರು 2,000 ಕೋಟಿ ರೂ. ವೆಚ್ಚದಲ್ಲಿ ಮಹತ್ವಾಕಾಂಕ್ಷೆಯ ಕಾರಿಡಾರ್ ಅಭಿವೃದ್ಧಿ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಈ ಮಾರ್ಗದಲ್ಲಿ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಜಂಕ್ಷನ್ ಬಳಿ ಸಿಗ್ನಲ್ ಬಿದ್ದ ವೇಳೆ ಸಾವಿರಾರು ವಾಹನಗಳು ಸಾಕಷ್ಟು ಸಮಯ ನಿಂತಲ್ಲೇ ನಿಲ್ಲುತ್ತವೆ. ವಾಹನಗಳು ನಿಲ್ಲುವ ಸಮಯ ನೋಡಿದರೆ ಕೋಟ್ಯಾಂತರ ರೂ. ನಷ್ಟವಾಗಲಿದೆ. ಈ ಸಂಚಾರ ದಟ್ಟಣೆಯಿಂದ ಹೆಚ್ಚು ಸಮಯ ವ್ಯರ್ಥವಾಗಲಿದೆ. ಆದ್ದರಿಂದ ಬಿಇಎಲ್, ಹೋಟೆಲ್ ತಾಜ್ ಜಂಕ್ಷನ್, ಹೊರವರ್ತುಲ ರಿಂಗ್ ರಸ್ತೆ, ತುಮಕೂರು ರಸ್ತೆ, ಪೈಪ್ ಲೈನ್ ರಸ್ತೆ, ಹೆಚ್.ಎಂ.ಟಿ ಜಂಕ್ಷನ್ ಸೇರಿದಂತೆ 6 ಕಡೆ ಮೇಲುಸೇತುವೆ ಹಾಗೂ ಕೆಳಸೇತುವೆ ಯೋಜನೆ ಜಾರಿಗೊಳಿಸಿ ಈ ಭಾಗವನ್ನು ಸಿಗ್ನಲ್ ಫ್ರೀ ಕಾರಿಡಾರ್ ಮಾಡಿದರೆ ಸಾರ್ವಜನಿಕರು ಹೆಚ್ಚು ಸಂಚಾರ ದಟ್ಟಣೆಯಿಲ್ಲದೆ ಸುಗಮವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

ಈ ಸಂಪೂರ್ಣ ಯೋಜನೆಗೆ ಸುಮಾರು 2,000 ಕೋಟಿ ರೂ. ವೆಚ್ಚದಲ್ಲಿ ಆಗಬಹುದು. ಇದನ್ನು 1 ವರ್ಷದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. 4 ಅಥವಾ 5 ವರ್ಷಗಳು ಬೇಕಾಗಲಿದೆ. 5 ವರ್ಷದಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ ಪೂರ್ಣಗೊಳಿಸಲು ಯೋಜನೆ ರೂಪಿಸಿಕೊಂಡು, ಪ್ರತಿ ವರ್ಷದ ಆಯವ್ಯಯದಲ್ಲಿ ಇಂತಿಷ್ಟು ಅನುದಾನ ಮೀಸಲಿರಿಸಿ ಯೋಜನೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ ಜಾರಿಗೊಳಿಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿ ಸಮಗ್ರವಾದ ನೀಲನಕ್ಷೆ ತಯಾರಿಸಿ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕಾರಿಡಾರ್ ಯೋಜನೆ ಮಾರ್ಗದಲ್ಲಿ ರಕ್ಷಣಾ ಭೂಮಿ ಹಾಗೂ ಖಾಸಗಿ ಭೂಮಿ ಬರಲಿದ್ದು, ಭೂಸ್ವಾಧೀನ ಮಾಡಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಚಾರಿ ಮಾರ್ಗ ಬದಲಾವಣೆ ಮಾಡಿಕೊಂಡು ಹಂತ-ಹಂತವಾಗಿ ಯೋಜನೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.