ETV Bharat / state

ಪೊಲೀಸ್ ಭದ್ರತೆಯೊಂದಿಗೆ ಕೇರಳಕ್ಕೆ ತೆರಳಿದ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಆರೋಪಿ ಮದನಿ

author img

By

Published : Jun 26, 2023, 8:24 PM IST

Updated : Jun 26, 2023, 11:00 PM IST

2008ರಲ್ಲಿ ನಡೆದ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್​ ನಾಸೀರ್​ ಮದನಿ ತಂದೆಯ ಅನಾರೋಗ್ಯ ನಿಮಿತ್ತ ಪೊಲೀಸ್​ ಭದ್ರತೆಯೊಂದಿಗೆ ಕೇರಳಕ್ಕೆ ತೆರಳಿದ್ದಾನೆ.

2008-serial-bomb-blast-accused-madani-went-to-kerala-with-police-security
ಪೊಲೀಸ್ ಭದ್ರತೆಯೊಂದಿಗೆ ಕೇರಳಕ್ಕೆ ತೆರಳಿದ 2008ರ ಸರಣಿ ಬಾಂಬ್ ಸ್ಫೋಟದ ಆರೋಪಿ ಮದನಿ

ಬೆಂಗಳೂರು : ಪೀಪಲ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ)ಯ ಮಾಜಿ ಅಧ್ಯಕ್ಷ ಹಾಗೂ 2008ರಲ್ಲಿ ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸೀರ್ ಮದನಿ ತಂದೆಯ ಅನಾರೋಗ್ಯ ನಿಮಿತ್ತ ಕೇರಳಕ್ಕೆ ತೆರಳಿದ್ದಾನೆ. ಇಂದು ಸಂಜೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೊಚ್ಚಿನ್‌ಗೆ ಪೊಲೀಸ್ ಬಂದೋಬಸ್ತ್‌ನೊಂದಿಗೆ ಪ್ರಯಾಣಿಸಿದ್ದಾನೆ.

ಸುಪ್ರೀಂಕೋರ್ಟ್‌ನಿಂದ ಅನುಮತಿ ಪಡೆದು ಮದನಿ 12 ಕಾಲ ಕೇರಳದಲ್ಲಿ ವಾಸ್ತವ್ಯ ಹೂಡಲಿದ್ದು, ಜುಲೈ 7ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾನೆ. ತಂದೆಯ ಅನಾರೋಗ್ಯ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳಲು ಅನುಮತಿ ಕೋರಿ ಸುಪ್ರೀಂಕೋರ್ಟ್​ಗೆ ಮದನಿ ಅರ್ಜಿ ಸಲ್ಲಿಸಿದ್ದ. ಈ ಸಂಬಂಧ ಮದನಿ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯವು ಕೇರಳಕ್ಕೆ ತೆರಳಲು ಅನುಮತಿ ನೀಡಿತ್ತು. ಹೀಗಾಗಿ ಓರ್ವ ಆರ್​ಎಸ್ಐ, ಮೂವರು ಕಾನ್‌ಸ್ಟೇಬಲ್‌ಗಳು ಹಾಗೂ ಓರ್ವ ಚಾಲಕನನ್ನು ನಿಯೋಜಿಸಲಾಗಿದೆ. 12 ದಿನಗಳ ಸಿಬ್ಬಂದಿ ಖರ್ಚು-ವೆಚ್ಚ ಹಾಗೂ ಸೇವಾ ಶುಲ್ಕ 6,76,101 ರೂಪಾಯಿಯನ್ನು ಕರ್ನಾಟಕಕ್ಕೆ ಸರ್ಕಾರಕ್ಕೆ ಮುಂಗಡವಾಗಿ ಪಾವತಿಸಿದ್ದಾನೆ ಎಂದು ಹೇಳಲಾಗಿದೆ.

2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಆರೋಪಿ ಜಾಮೀನಿನ ಮೇರೆಗೆ ಹೊರಗಿರುವ ಮದನಿ ಜಾಮೀನಿನ ಷರತ್ತು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿದ್ದಾನೆ. ತಂದೆಯ ಅನಾರೋಗ್ಯ ಹಿನ್ನೆಲೆ ಕರ್ನಾಟಕ ಪೊಲೀಸರು ವಿಧಿಸಿರುವ ಭದ್ರತಾ ರಕ್ಷಣೆ ಹಣ ಕಡಿಮೆ ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದ. ಆದರೆ ಕೋರ್ಟ್‌ ಅರ್ಜಿ ನಿರಾಕರಿಸಿತ್ತು.

2008 ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮದನಿ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇವರೊಂದಿಗೆ ಇತರ 31 ಮಂದಿಯ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.

ಅಲ್ಲದೆ 1998 ಫೆಬ್ರವರಿಯಲ್ಲಿ ಕೊಯಮತ್ತೂರಿನಲ್ಲಿ ನಡೆದ ಬಾಂಬ್​ ಸ್ಫೋಟ ಪ್ರಕರಣದಲ್ಲೂ ಮದನಿ ಆರೋಪಿಯಾಗಿದ್ದರು. 1998ರ ಮಾರ್ಚ್ ತಿಂಗಳಲ್ಲಿ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಅಂತಿಮವಾಗಿ 2007ರಲ್ಲಿ ಪ್ರಕರಣದಿಂದ ಖುಲಾಸೆಗೊಂಡಿದ್ದರು.

ಇದನ್ನೂ ಓದಿ : ಮದನಿ ವಿರುದ್ಧ ಸಾಕ್ಷಿ ಹೇಳದಂತೆ ಬೆದರಿಕೆ ಆರೋಪ : ಪ್ರಕರಣ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

Last Updated : Jun 26, 2023, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.