ಬೆಂಗಳೂರು: ಮಹಾಮಾರಿ ಕೊರೊನಾ ಅಬ್ಬರ ರಾಜ್ಯದಲ್ಲಿ ಮುಂದುವರೆದಿದ್ದು, ಇಂದು ಒಂದೇ ದಿನ 204 ಹೊಸ ಕೋವಿಡ್ ಪ್ರಕರಣ ಕಾಣಿಸಿಕೊಂಡಿದೆ. ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ನಿಂದಾಗಿ ಇಂದು ಒಂದೇ ದಿನ ಐವರು ಸಾವನ್ನಪ್ಪಿದ್ದು, 55 ಹೊಸ ಕೋವಿಡ್ ಪ್ರಕರಣ ಕಾಣಿಸಿಕೊಂಡಿವೆ. ಉಳಿದಂತೆ ಶಿವಮೊಗ್ಗ, ಬಳ್ಳಾರಿ ಹಾಗೂ ಬೀದರ್ನಲ್ಲಿ ತಲಾ ಒಂದು ಸಾವು ಸಂಭವಿಸಿದೆ. ರಾಜ್ಯದಲ್ಲಿ ಇದೀಗ ಒಟ್ಟು 7,734 ಕೋವಿಡ್ ಪ್ರಕರಣಗಳಿದ್ದು, ಅದರಲ್ಲಿ 4,804 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ 2,824 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 102 ಜನರು ಕೋವಿಡ್ನಿಂದ ಸಾವನ್ನಪ್ಪಿದ್ದು, 72 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 204 ಪಾಸಿಟಿವ್ ಪ್ರಕರಣಗಳ ಪೈಕಿ, 106 ಅಂತಾರಾಜ್ಯ ಹಾಗೂ ಇಬ್ಬರು ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಬೆಂಗಳೂರಿನಲ್ಲಿ 55, ಯಾದಗಿರಿ 37, ಬಳ್ಳಾರಿ 29, ಕಲಬುರಗಿ 19, ಬೀದರ್ 12, ದಕ್ಷಿಣ ಕನ್ನಡ, ಧಾರವಾಡ ತಲಾ 8, ಮಂಡ್ಯ 7, ಹಾಸನ 5, ಉಡುಪಿ, ಬಾಗಲಕೋಟೆ, ಶಿವಮೊಗ್ಗದಲ್ಲಿ ತಲಾ 4, ದಾವಣಗೆರೆ, ಚಿಕ್ಕಬಳ್ಳಾಪುರ, ಉತ್ತರ ಕನ್ನಡದಲ್ಲಿ ತಲಾ 3, ಹಾಗೂ ರಾಯಚೂರು, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ 1 ಕೇಸ್ ಕಾಣಿಸಿಕೊಂಡಿದ್ದು, ಬೆಳಗಾವಿಯಲ್ಲಿ ಯಾವುದೇ ಕೇಸ್ ಇಂದು ಸಿಕ್ಕಿಲ್ಲ.