ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಅಟ್ಟಹಾಸ ನಿಯಂತ್ರಿಸಲು ಲಾಕ್‌ಡೌನ್ ಘೋಷಿಸಿದಾಗಿಂದಲೂ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಇಂದು ನಗರದಲ್ಲಿ ಸೋಂಕಿತರ ಸಂಖ್ಯೆ 2,203ಕ್ಕೆ ಇಳಿಕೆಯಾಗಿದ್ದು, ನಿನ್ನೆ 2,395 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ನಿನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದೆ.
ಬೆಂಗಳೂರಲ್ಲಿ ಲಾಕ್‌ಡೌನ್ ಜಾರಿಯಾದ ಬಳಿಕ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ದಾಖಲಾಗಿದೆ. ನಗರದಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಇದ್ದು, ಸರ್ಕಾರ ಹಂತಹಂತವಾಗಿ ಅನ್ಲಾಕ್(Unlock) ಘೋಷಣೆ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕುಸಿದ ಕೋವಿಡ್ ಆರ್ಭಟ: ನಗರದತ್ತ ಧಾವಿಸುತ್ತಿರುವ ಜನರಿಂದ ಟ್ರಾಫಿಕ್ ಜಾಮ್