ಬೆಂಗಳೂರು : ಪೊಲೀಸ್ ಇಲಾಖೆ ಸಿಬ್ಬಂದಿಗೂ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ರಾಜ್ಯದಲ್ಲಿ ಪ್ರಸ್ತುತ 240 ಪೊಲೀಸರು ಸೋಂಕು ದೃಢಪಟ್ಟಿದೆ. ಈ ಪೈಕಿ ನಗರದ 143 ಪೊಲೀಸರಲ್ಲಿ ಕೊರೊನಾ ಆವರಿಸಿಕೊಂಡಿದೆ.
ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾದ ಪೊಲೀಸರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ 240 ಪೊಲೀಸರು ಕೊರೊನಾದಿಂದ ಬಳಲುತ್ತಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಪೊಲೀಸರಿಗೆ ಕೊರೊನಾ ತಗುಲಿದೆ. 143 ಪೊಲೀಸರು ಕೊರೊನಾಗೆ ತುತ್ತಾಗಿದ್ದಾರೆ.
ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದಲ್ಲಿರುವ 45 ವರ್ಷ ಮೇಲ್ಪಟ್ಟ ಸದಸ್ಯರಿಗೆ ಮೊದಲನೆಯ ಹಾಗೂ ಎರಡನೇ ಕೊರೊನಾ ಲಸಿಕೆ ಕಡ್ಡಾಯವಾಗಿ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಠಾಣೆ ಮತ್ತು ಕಚೇರಿಗಳ ಮುಂಭಾಗ ಸಾರ್ವಜನಿಕರ ಭೇಟಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.