ಬೆಂಗಳೂರು : ವಿದೇಶಗಳಿಂದ ರಾಜ್ಯಕ್ಕೆ ಆಗಮಿಸಿದ ಹಾಗೂ ಅವರ ಜೊತೆ ಸಂಪರ್ಕ ಹೊಂದಿದ 1.25 ಲಕ್ಷ ಜನರ ವಿಳಾಸ ಸಂಗ್ರಹಿಸಲಾಗಿದೆ. ಅವರಲ್ಲಿ 25 ಸಾವಿರ ಜನರ ಪರೀಕ್ಷೆಯನ್ನು ಮೂರು ವಾರದಲ್ಲಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, 25 ಸಾವಿರ ಜನರ ಪರೀಕ್ಷೆ ನಡೆಸಲು ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ1500 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 51 ಜನರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಇಲ್ಲಿಯವರೆಗೆ ಕಲಬುರಗಿ ಮತ್ತು ಬೆಂಗಳೂರು ಮೂಲದ ಇಬ್ಬರು ಮೃತಪಟ್ಟಿದ್ದಾರೆ ಎಂದು ಸಚಿವರು ಮಾಹಿತಿ ಮಾಧ್ಯಮಗಳಿಗೆ ನೀಡಿದರು.
ಕೋವಿಡ್-19 ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರ ಸಹಕಾರ ಇದಕ್ಕೆ ಅತ್ಯಗತ್ಯವಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಯಾರು ಹೊರಗಡೆ ಬರದಿದ್ದರೆ ಮಾರಕ ಕೊರೋನಾವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ಸಚಿವರು ತಿಳಿಸಿದರು.