ETV Bharat / state

ಬೆಂಗಳೂರಲ್ಲಿಂದು 2,721 ಮಂದಿಗೆ ಸೋಂಕು ದೃಢ, 41 ಬಲಿ - Bangalore latest news

ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು 2,721 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Bangalore corona cases
Bangalore corona cases
author img

By

Published : Aug 28, 2020, 8:16 PM IST

ಬೆಂಗಳೂರು: ನಗರದಲ್ಲಿಂದು 2,721 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 41 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ನಗರದಲ್ಲಿ ಸೋಂಕಿತರ ಸಂಖ್ಯೆ 1,21,449 ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 1,886ಕ್ಕೆ ತಲುಪಿದೆ.

2,148 ಮಂದಿ ಇಂದು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ‌ಒಟ್ಟು 83,041 ಮಂದಿ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ.

ಸದ್ಯ 36,521 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 312 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಪಾಸಿಟಿವ್ ಪ್ರಕರಣಗಳ ಪ್ರಮಾಣ ನಗರದಲ್ಲಿ ಶೇ 15.55 ರಷ್ಟಿದ್ದು, ಮರಣ ಪ್ರಮಾಣ ಶೇ 1.55 ರಷ್ಟಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.