ETV Bharat / state

ರಾಜ್ಯದಲ್ಲಿಂದು 2,366 ಜನರಿಗೆ ಕೋವಿಡ್ ಪರೀಕ್ಷೆ; 28 ಸೋಂಕಿತರು ಪತ್ತೆ - ಪ್ರಯಾಣಿಕರ ಆರೋಗ್ಯ ತಪಾಸಣೆ

ರಾಜ್ಯದಲ್ಲಿ ಶುಕ್ರವಾರ ಕಂಡುಬಂದ ಕೊರೊನಾ ಪ್ರಕರಣಗಳ ಅಂಕಿ-ಸಂಖ್ಯೆ ಇಲ್ಲಿದೆ.

COVID positive cases
COVID positive cases
author img

By ETV Bharat Karnataka Team

Published : Dec 22, 2023, 10:41 PM IST

ಬೆಂಗಳೂರು: ರಾಜ್ಯದಲ್ಲಿ ಇಂದು 2,366 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 28 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 162 ಜನರು ಗೃಹ ಆರೈಕೆಯಲ್ಲಿದ್ದು, 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 6 ಜನರು ಐಸಿಯು ಹಾಗೂ 7 ಜನರು ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 68 ಜನರಲ್ಲಿ ಸೋಂಕು ಕಾಣಿಸಿಕೊಂಡರೆ, ಚಿಕ್ಕಮಗಳೂರಿನಲ್ಲಿ 4, ಶಿವಮೊಗ್ಗದಲ್ಲಿ 3, ದಕ್ಷಿಣ ಕನ್ನಡ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ 2 ಹಾಗೂ ಮೈಸೂರಿನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಶಿವಮೊಗ್ಗ ವರದಿ: ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಪಾಸಿಟಿಟ್ ಕಂಡು ಬಂದಿದೆ. ಓರ್ವ ಮಹಿಳೆ ಸೇರಿದಂತೆ ಇಬ್ಬರು ಪುರುಷರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಮಹಿಳೆಯು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಹೋಂ ಕ್ವಾರಟೈನ್ ಆಗಿದ್ದಾರೆ. ಮೂವರಿಗೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಸದ್ಯ ಯಾವುದೇ ಅಪಾಯ ಕಂಡುಬಂದಿಲ್ಲ.

ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿರುವ ಕುರಿತು ಸ್ಪಷ್ಟಪಡಿಸಿದ ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ.ತಿಮ್ಮಪ್ಪ, ಮೊನ್ನೆ ಪರೀಕ್ಷೆ ನಡೆಸಿದ ಮೂವರಲ್ಲಿ ಸಾರಿ ಪ್ರಕರಣದಂತೆ ಕಂಡುಬಂದಿತ್ತು. ನಂತರ ಆರ್​ಟಿಪಿಸಿಆರ್​ ಪರೀಕ್ಷೆಗೆ ಒಳಪಡಿಸಿದಾಗ ಅದು ಕೋವಿಡ್ ಎಂದು ಗೊತ್ತಾಗಿದೆ. ಆದರೆ, ಯಾವುದೇ ಅಪಾಯದ ಸ್ಥಿತಿಯಲ್ಲಿ ಯಾರೂ ಇಲ್ಲ. ಎಲ್ಲರೂ ನಾರ್ಮಲ್ ಆಗಿದ್ದಾರೆ. ಆಸ್ಪತ್ರೆಯಲ್ಲಿ 30 ಆಕ್ಸಿಜನ್ ಬೆಡ್ ಸಿದ್ದಮಾಡಿದ್ದೇವೆ. 12 ಐಸಿಯು ಬೆಡ್ ಇವೆ. ಜನತೆ ಆತಂಕಕ್ಕೆ ಒಳಗಾಗುವುದು ಬೇಡ. ಯಾವುದೇ ಲಕ್ಷಣ ಗೋಚರಿಸಿದರೆ ಚಿಕಿತ್ಸೆ ಪಡೆದುಕೊಳ್ಳಿ. 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದರು.

ಕೊಡಗು ವರದಿ: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ನಂತರ ಕರ್ನಾಟಕದಲ್ಲಿ ಅದರಲ್ಲೂ ಗಡಿಭಾಗ ಕೊಡಗಿನಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಅಧಿಕಾರಿಗಳು ಚೆಕ್ ಪೋಸ್ಟ್​ಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಬಿಡುತ್ತಿದ್ದಾರೆ. ಆರೋಗ್ಯ ಇಲಾಖೆಯಿಂದ ಇಬ್ಬರು ಕಮ್ಯೂನಿಟಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ತಪಾಸಣೆ ವೇಳೆ ಜ್ವರ, ನೆಗಡಿ, ಕೆಮ್ಮು ಕಂಡುಬಂದರೆ ಅಂಥವರ ಹೆಸರು, ವಿಳಾಸ ಮತ್ತು ಮೊಬೈಲ್‌ ನಂಬರ್‌ ಪಡೆದು, ಪ್ರಯಾಣಿಕರು ಎಲ್ಲಿಗೆ ತೆರಳುತ್ತಾರೋ ಆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ರವಾನಿಸಲಾಗುತ್ತಿದೆ.

ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ: ಜೆಎನ್.1 ಹೊಸ ತಳಿ ಕಂಡು ಬರುತ್ತಿದ್ದು, ಚಿಕಿತ್ಸೆ ನೀಡಲು ಹಾಗೂ ಹರಡದಂತೆ ತಡೆಗಟ್ಟಲು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಮ್ಮ ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೋವಿಡ್ ನಿರ್ವಹಣೆ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೊಸ ತಳಿ ಹರಡುತ್ತಿದ್ದು ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಕಾಯಿಲೆಗಳು ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ಲಕ್ಷಣ ಇರುವವರು ಕೋವಿಡ್ ಟೆಸ್ಟ್ ಮಾಡಿಸಬೇಕು ಎಂಬ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಕೇರಳ ಮತ್ತು ತಮಿಳುನಾಡು ಚೆಕ್ ಪೋಸ್ಟ್​ಗಳಲ್ಲಿ ಅವರಿಗೆ ಅರ್ಥ ಆಗುವ ಭಾಷೆಯಲ್ಲಿ ಕೋವಿಡ್ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಮಾಹಿತಿ ಪ್ರದರ್ಶನ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಚುರುಕುಗೊಂಡ ಕೋವಿಡ್ ಪರೀಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.