ಬೆಂಗಳೂರು: ನಗರದಲ್ಲಿ ಇಂದು 2963 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು 25 ಮಂದಿ ಮೃತಪಟ್ಟ ವರದಿಯಾಗಿದೆ. ಒಟ್ಟು ಈವರೆಗೆ ಮೃತಪಟ್ಟವರ ಸಂಖ್ಯೆ 2091 ಆಗಿದೆ. ಒಟ್ಟು ಕೋವಿಡ್ ಪಾಸಿಟಿವ್ ಸಂಖ್ಯೆ 141664ಕ್ಕೆ ಏರಿಕೆಯಾಗಿದೆ.
ಇಂದು 1732 ಮಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 97926 ಮಂದಿ ಚೇತರಿಸಿಕೊಂಡಿದ್ದಾರೆ. 41646 ಸಕ್ರಿಯ ಪ್ರಕರಣಗಳಿವೆ. ಒಟ್ಟು 276 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ ಕೆ.ಆರ್ ಮಾರುಕಟ್ಟೆ ಸೇರಿದಂತೆ ಹೆಚ್ಚು ಜನ ಸೇರುವ ಜಾಗಗಳಲ್ಲಿ ಸೋಂಕಿನ ಲಕ್ಷಣ ಇರುವವರಿಗೆ ಅನುಕೂಲವಾಗುವಂತೆ ಕೆ.ಆರ್. ಮಾರುಕಟ್ಟೆ ಬಸ್ ನಿಲ್ದಾಣದಲ್ಲಿ ಉಚಿತವಾಗಿ ರ‍್ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗುತ್ತಿದೆ.