ಬೆಂಗಳೂರು: ಇದೇ ಭಾನುವಾರ 28ರಂದು ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.
ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ಕಾರಣ 2 ಗಂಟೆ ಕಾಲ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಅವಧಿಯಲ್ಲಿ ಪ್ರಯಾಣಿಕರಿಗೆ ಎಂ.ಜಿ.ರಸ್ತೆ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ.
ಈ ದುರಸ್ತಿ ಕಾಮಗಾರಿಯು ಪೂರ್ಣಗೊಂಡ ನಂತರ ಎಂದಿನಂತೆ ಮೆಟ್ರೋ ಸೇವೆ ಮುಂದುವರಿಯಲಿದೆ. ಹಸಿರು ಮಾರ್ಗದಲ್ಲಿ ಎಂದಿನಂತೆ ಇರುತ್ತದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.