ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನ 23,771 ವಿದ್ಯಾರ್ಥಿಗಳು ಗೈರು.. ಇಬ್ಬರು ಡಿಬಾರ್ - ಈಟಿವಿ ಭಾರತ ಕನ್ನಡ

ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ - 5,10,026 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು - 23,771 ವಿದ್ಯಾರ್ಥಿಗಳು ಗೈರು - ಇಬ್ಬರು ಡಿಬಾರ್​​

2nd-puc-exam-first-day-report
ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನ 23,771 ವಿದ್ಯಾರ್ಥಿಗಳು ಗೈರು.. ಇಬ್ಬರು ಡಿಬಾರ್
author img

By

Published : Mar 9, 2023, 10:54 PM IST

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಒಟ್ಟು 23,771 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 32 ಜಿಲ್ಲೆಗಳಿಂದ 5,33,797 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪ್ರಥಮ ಭಾಷೆ ಪರೀಕ್ಷೆಗೆ ಇಂದು ಒಟ್ಟು 5,10,026 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 23,771 ವಿದ್ಯಾರ್ಥಿಗಳು ಗೈರಾಗಿದ್ದು, ಶೇಕಡಾ 95.55ರಷ್ಟು ಹಾಜರಾತಿ ಇತ್ತು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

2nd-puc-exam-first-day-report
ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನದ ಅಂಕಿ ಅಂಶ

ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಲ್ಲಿಯೂ ಅಹಿತಕರ ಘಟನೆ ನಡೆದ ಬಗ್ಗೆ ವರದಿ ಆಗಿಲ್ಲ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಅತ್ಯಂತ ಶಾಂತಿಯುತವಾಗಿ ನಡೆದಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾದ ಮಲ್ಲೇಶ್ವರ ಕಾಲೇಜಿನ ವಿದ್ಯಾರ್ಥಿನಿಯನ್ನು ಹೊರತುಪಡಿಸಿದರೆ ಬೇರೆ ಎಲ್ಲಿಯೂ ಹಿಜಾಬ್ ವಿಚಾರವಾಗಿ ಗೊಂದಲ ಸೃಷ್ಟಿ ಆಗಲಿಲ್ಲ. ಮಲ್ಲೇಶ್ವರ ಖಾಸಗಿ ಕಾಲೇಜಿನಲ್ಲಿಯೂ ಸಹ ಪ್ರಾಂಶುಪಾಲರು ವಿದ್ಯಾರ್ಥಿನಿ ಮನವೊಲಿಸಿ ಹಿಜಾಬ್​ ತೆಗೆದಿಟ್ಟು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟರು. ಉಳಿದಂತೆ ಎಲ್ಲಿಯೂ ಪರೀಕ್ಷೆಗೆ ತೊಡಕು ಎದುರಾಗಲಿಲ್ಲ.

ಇದನ್ನೂ ಓದಿ : ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ

ಇಬ್ಬರು ವಿದ್ಯಾರ್ಥಿಗಳು ಡಿಬಾರ್ : ಪರೀಕ್ಷೆಯಲ್ಲಿ ನಕಲು ಮಾಡಲು ಮುಂದಾದ ಇಬ್ಬರು ವಿದ್ಯಾರ್ಥಿಗಳು ಇಂದು ಡಿಬಾರ್ ಆಗಿದ್ದಾರೆ. ಬೆಳಗಾವಿ ಹಾಗೂ ಯಾದಗಿರಿಯಲ್ಲಿ ತಲಾ ಓರ್ವ ವಿದ್ಯಾರ್ಥಿ ಪರೀಕ್ಷೆ ನಕಲು ಸಂದರ್ಭ ಸಿಕ್ಕಿಬಿದ್ದಿದ್ದಾರೆ. ಈ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇಂದು ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ ಸುಗಮವಾಗಿ ನಡೆಸಲು ಶಿಕ್ಷಣ ಇಲಾಖೆ ವಿಶೇಷ ಗಮನ ಹರಿಸಿತ್ತು. ಸಾಕಷ್ಟು ಮುಂಜಾಗ್ರತಾ ಕ್ರಮವನ್ನು ಕೈಗೊಂಡು ಪರೀಕ್ಷಾ ಕೇಂದ್ರವನ್ನು ಸಿದ್ಧಗೊಳಿಸಿತ್ತು. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಒಳಗೆ ಕೆಲವು ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ ನಿರ್ಬಂಧ ಹೇರಲಾಗಿತ್ತು. ಹೆಚ್ಚುವರಿ ಮೇಲ್ವಿಚಾರಕರನ್ನು ನೇಮಿಸಿ ಪರೀಕ್ಷಾ ಅಕ್ರಮ ತಡೆಯಲು ಕ್ರಮ ಕೈಗೊಳ್ಳಲಾಗಿತ್ತು. ಸರ್ಕಾರದ ಈ ಪ್ರಯತ್ನ ಯಶಸ್ವಿಯಾಗಿದ್ದು ನಕಲು ಪ್ರಮಾಣ ಸಹ ಗಣನೀಯವಾಗಿ ಇಳಿಕೆಯಾಗಿದೆ. ಮುಂಬರುವ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗೆ ತೊಡಕಾಗದ ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸರ್ಕಾರ ಯೋಜನೆ ರೂಪಿಸಿದೆ.

ದ್ವಿತೀಯ ಪಿಯುಸಿ ಫಲಿತಾಂಶದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿರುವುದನ್ನು ಗಮನಿಸಿರುವ ಶಿಕ್ಷಣ ಇಲಾಖೆ ಈ ಸಾರಿ ಹೊಸ ಬದಲಾವಣೆ ಮಾಡಿದೆ. 20 ಅಂಕಗಳ ಬಹು ಆಯ್ಕೆಯ ಪ್ರಶ್ನೆಗಳ ಅವಕಾಶವನ್ನು ನೀಡಿದ್ದು, ಅಕ್ಕಪಕ್ಕದ ರಾಜ್ಯಗಳಲ್ಲಿ ಅಳವಡಿಸಿ ಯಶಸ್ವಿಯಾಗಿರುವ ಈ ಪ್ರಯೋಗವನ್ನು ಇದೇ ಮೊದಲ ಬಾರಿಗೆ ರಾಜ್ಯದಲ್ಲಿಯೂ ಜಾರಿಗೆ ತರಲಾಗಿದೆ. ಈ ಮೂಲಕ ಫಲಿತಾಂಶದ ಪ್ರಮಾಣವನ್ನು ಹೆಚ್ಚಿಸುವ ಕಾರ್ಯಕ್ಕೆ ನಾಂದಿ ಹಾಡಲಾಗಿದೆ.

ಇದನ್ನೂ ಓದಿ :ಪಿಯು ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: 1 ಅಂಕದ 20 ಬಹುಮಾದರಿಯ ಪ್ರಶ್ನೆಗೆ ಆದ್ಯತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.