ETV Bharat / state

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ಪ್ರಕಟ: ಮೇ 22 ರಿಂದ ಜೂನ್ 2 ರವರೆಗೆ ಪರೀಕ್ಷೆ - PUC result 2023

ಮೇ 22ರಿಂದ ಜೂನ್​ 2 ರವರೆಗೆ ಪ್ರತಿದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
author img

By

Published : May 2, 2023, 10:57 PM IST

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ಪ್ರಕಟಗೊಂಡಿದೆ. ಮೇ 22 ರಿಂದ ಜೂನ್ 2 ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಮೇ 22 ರಂದು ಕನ್ನಡ ವಿಷಯದ ಪರೀಕ್ಷೆ ನಡೆಯಲಿದ್ದು,‌ 23 ರಂದು ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. 24 ರಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದ್ದು, ‌25 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಿತ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ. 26 ರಂದು ಇತಿಹಾಸ ಮತ್ತು ಸಂಖ್ಯಾಶಾಸ್ತ್ರದ ಪರೀಕ್ಷೆ ನಡೆಯಲಿದ್ದು,‌ 27 ರಂದು ಹಿಂದಿ ವಿಷಯದ ಪರೀಕ್ಷೆ ನಡೆಯಲಿದೆ.

ಮೇ. 29 ರಂದು ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು, ಮೇ 30 ರಂದು ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ. 31 ರಂದು ರಾಜ್ಯ ಶಾಸ್ತ್ರ ಮತ್ತು ಗಣಿತ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು, ಜೂನ್ 1 ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆ ನಡೆಯಲಿದ್ದು, ಕಡೆಯ ದಿನವಾದ ಜೂನ್ 2 ರಂದು ಅರ್ಥ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪ್ರತಿ ದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದ್ದು, ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೂ ಸಿಇಟಿ ಪರೀಕ್ಷೆಗೆ ಅವಕಾಶ: ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು (ಏಪ್ರಿಲ್ 27-2023) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಮೊದಲು ತಿಳಿಸಿತ್ತು.

ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಗಳನ್ನು ಮೇ 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಇಟಿ ಪರೀಕ್ಷೆ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದರು.

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಅಂಥವರೂ ಸಿಇಟಿ ಪರೀಕ್ಷೆ ಬರೆಯಬಹುದು, ಪೂರಕ ಪರೀಕ್ಷೆ ಬರೆಯುವವರು ಸಿಇಟಿಗೆ ಹಾಜರಾದರೆ ಮಾತ್ರ ಅವರ ಪೂರಕ ಪಿಯು ಪರೀಕ್ಷೆ ಫಲಿತಾಂಶದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

ವೃತ್ತಿಪರ ಕೋರ್ಸ್​ಗಳಿಗೆ ಪರೀಕ್ಷೆ: ಇಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ (ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೂ ಸಿಇಟಿ ಪರೀಕ್ಷೆಗೆ ಅವಕಾಶ..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.