ಬೆಂಗಳೂರು: ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳಿಂದ ಜಿಲ್ಲೆ ಈಗಲೂ ಗ್ರೀನ್ ಝೋನ್ ಆಗಿ ಉಳಿದಿದೆ ಎಂಬ ಈ ಸಂತಸದ ಸುದ್ದಿಯನ್ನು ಹಂಚಿಕೊಳ್ಳಲು ಖುಷಿ ಆಗುತ್ತಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಪಾದರಾಯನಪುರದ ಆರೋಪಿಗಳ ನೇರ ಸಂಪರ್ಕಕ್ಕೆ ಬಂದಿದ್ದ ರಾಮನಗರದ ಜೈಲು ಸಿಬ್ಬಂದಿ, ಪೊಲೀಸರು, ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಚಾಲಕರು ಸೇರಿದಂತೆ ಒಟ್ಟು ಸಂಪರ್ಕಕ್ಕೆ ಬಂದಿದ್ದ ಎಲ್ಲಾ 68 ಮಂದಿಯನ್ನು ಎರಡನೇ ಬಾರಿಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಎಲ್ಲರದ್ದೂ ನೆಗೆಟಿವ್ ಫಲಿತಾಂಶ ಬಂದಿರುವುದು ನನಗೆ ತುಂಬಾ ಸಮಾಧಾನ ತಂದಿದೆ ಎಂದು ಡಿಸಿಎಂ ತಿಳಿದ್ದಾರೆ.
ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಆರೋಪಿಗಳಲ್ಲಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕ ಜೈಲನ್ನೇ ಸೀಲ್‌ಡೌನ್ ಮಾಡಿ 100 ಮೀಟರ್ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ ಎಚ್ಚರ ವಹಿಸಲಾಗಿತ್ತು.