ಬೆಂಗಳೂರು : ಬಿಜೆಪಿ ಎಸ್‍ಸಿ ಮೋರ್ಚಾದ ರಾಜ್ಯ ಪ್ರಭಾರಿಗಳನ್ನಾಗಿ ಕರ್ನಾಟಕದ ಮೂವರು ನಾಯಕರನ್ನು ನೇಮಕ ಮಾಡಲಾಗಿದೆ. ಕೋಲಾರ ಸಂಸದ ಮುನಿಸ್ವಾಮಿ ಅವರನ್ನು ಕೇರಳ ರಾಜ್ಯಕ್ಕೆ, ವೆಂಕಟೇಶ್ ಮೌರ್ಯ ಅವರನ್ನು ತಮಿಳುನಾಡು ರಾಜ್ಯಕ್ಕೆ ಮತ್ತು ಜಯಕುಮಾರ್ ಕಾಂಗೆ ಅವರನ್ನು ತೆಲಂಗಾಣ ರಾಜ್ಯಕ್ಕೆ ಪ್ರಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಹೊಸದಾಗಿ ನೇಮಕಗೊಂಡವರು ಈ ಜವಾಬ್ದಾರಿ ನೀಡಿರುವ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಭಾರಿ ಸಿ ಟಿ ರವಿ, ಎಸ್ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ಎಸ್‍ಸಿ ಮೋರ್ಚಾ ಸಂಘಟನೆಯನ್ನು ವಿವಿಧ ರಾಜ್ಯಗಳಲ್ಲಿ ಬಲಪಡಿಸುವ ದೃಷ್ಟಿಯಿಂದ ಇವರು ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ವಿವಿಧ ರಾಜ್ಯಗಳಿಗೆ ಪ್ರಭಾರಿಗಳನ್ನು ನೇಮಿಸಿ ಪಕ್ಷದ ರಾಷ್ಟ್ರೀಯ ನಾಯಕರು ಆದೇಶ ಹೊರಡಿಸಿದ್ದಾರೆ.
ಇದರಲ್ಲಿ ಮೂವರು ಕನ್ನಡಿಗರಿಗೆ ಆಕಾಶ ನೀಡಿರುವುದು ಇನ್ನೊಂದು ವಿಶೇಷವಾಗಿದೆ. ಅಲ್ಲದೆ ಮಹತ್ವದ ಜವಾಬ್ದಾರಿ ನಿರ್ವಹಿಸುವ ಹೊಣೆಗಾರಿಕೆಯನ್ನು ಇವರಿಗೆ ನೀಡುವ ಮೂಲಕ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರಿಗೆ ಹೆಚ್ಚುವರಿ ಜವಾಬ್ದಾರಿಯನ್ನೂ ಹೊರಿಸಿದ್ದಾರೆ.
ಓದಿ: ನೆರೆ ಸಂತ್ರಸ್ತರಿಗೆ ಬಿಎಸ್ವೈ ಸರ್ಕಾರದ ಮಾದರಿಯಲ್ಲಿಯೇ ಪರಿಹಾರ : ಸಿಎಂ ಬೊಮ್ಮಾಯಿ