ETV Bharat / state

ಸಿಎಂ, ಕೇಂದ್ರ ಸಚಿವರ ವಿರುದ್ಧ ಚು.ಆಯೋಗಕ್ಕೆ ಮೂರು ದೂರು ನೀಡಿದ ಕಾಂಗ್ರೆಸ್

ಈ ಮೂಲಕ ಬಿಜೆಪಿ ನಾಯಕರು ನಮಗೆ ಮತ ನೀಡದಿದ್ದರೆ ದೇವರ ಅವಕೃಪೆಗೆ ಗುರಿಯಾಗುವಿರಿ ಎನ್ನುವ ಭಾವನೆಯನ್ನು ಬಿತ್ತುವ ಕಾರ್ಯ ಮಾಡಿದ್ದಾರೆ. ಇದು ಕಾನೂನು ಪ್ರಕಾರ ಅಪರಾಧ ಆಗಲಿದೆ..

Salim Ahmed, KPCC president
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್
author img

By

Published : Oct 31, 2020, 5:56 PM IST

Updated : Oct 31, 2020, 6:25 PM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ಮೂರು ಪ್ರತ್ಯೇಕ ದೂರುಗಳನ್ನು ಸಲ್ಲಿಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು ಹಾಗೂ ರಾಜರಾಜೇಶ್ವರಿನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರತ್ಯೇಕ ದೂರುಗಳನ್ನು ನೀಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅವರನ್ನು ಒಳಗೊಂಡ ನಿಯೋಗವು ಇಂದು ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಕೆ ಮಾಡಿದೆ.

ಸಿಎಂ, ಕೇಂದ್ರ ಸಚಿವರು ಸೇರಿ ಚು.ಆಯೋಗಕ್ಕೆ ಮೂರು ದೂರು ನೀಡಿದ ಕಾಂಗ್ರೆಸ್

ದೂರು ಸಲ್ಲಿಕೆ ನಂತರ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪ್ರತ್ಯೇಕ ಮೂರು ದೂರುಗಳನ್ನು ಚುನಾವಣಾ ಆಯುಕ್ತರಿಗೆ ನೀಡಿದ್ದೇವೆ. ಶಿರಾದಲ್ಲಿ ಪ್ರಚಾರ ನಡೆಸಿದ ಸಂದರ್ಭ ಸಿಎಂ ಬಿ.ಎಸ್. ಯಡಿಯೂರಪ್ಪ ನಿನ್ನೆ ನೀಡಿದ ಆಮಿಷ ರೂಪದ ಹೇಳಿಕೆ ವಿರುದ್ಧ ದೂರು ಸಲ್ಲಿಸಿದ್ದೇವೆ. ಮತ್ತೊಂದು ದೂರು ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಅಭ್ಯರ್ಥಿಗಳಿಗೆ ಹಣ ಹಂಚುವ ಗುರುತಿಗಾಗಿ ಮನೆಗಳಿಗೆ ಸ್ಟಿಕ್ಕರ್ ನೀಡುತ್ತಿರುವ ಕುರಿತು ದೂರು ಸಲ್ಲಿಸಿದ್ದೇವೆ.

ಸಚಿವರಾದ ಅಶೋಕ್, ಎಸ್ ಟಿ ಸೋಮಶೇಖರ್ ಗೋಪಾಲಯ್ಯ ಹಾಗೂ ನಾರಾಯಣಗೌಡ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ದೂರು ನೀಡಿದ್ದೇವೆ. ಆಯುಕ್ತರಿಂದ ಬಗ್ಗೆ ತನಿಖೆ ನಡೆಸುವ ಭರವಸೆ ಸಿಕ್ಕಿದೆ ಎಂದರು.

ದೂರಿನ ಕುರಿತು ವಿವರಣೆ ನೀಡಿದ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ವಿ.ಎಸ್ ಉಗ್ರಪ್ಪ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ, ಡಿಸಿಎಂ ಗೋವಿಂದ ಕಾರಜೋಳ ಹಾಗೂ ಸಚಿವ ನಾರಾಯಣಗೌಡ ವಿರುದ್ಧ ಹಾಗೂ ಸಂಸದರಾದ ನಾರಾಯಣಸ್ವಾಮಿ, ಪ್ರತಾಪ್ ಸಿಂಹ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ಅಭ್ಯರ್ಥಿಯಾಗಿರುವ ರಾಜೇಶ್ ಗೌಡ ಇನ್ನಿತರರ ವಿರುದ್ಧ ದೂರು ದಾಖಲಿಸಿದ್ದೇವೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿರಾ ವಿಧಾನಸಭಾ ಕ್ಷೇತ್ರದ ಮದಲೂರು ಎಂಬ ಗ್ರಾಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭ ನನ್ನನ್ನು ನಂಬಿ ಅಭ್ಯರ್ಥಿಯನ್ನು ಗೆಲ್ಲಿಸಿ ಕೊಡಿ. ಮುಂದಿನ ಆರು ತಿಂಗಳಲ್ಲಿ ಮದಲೂರು ಕೆರೆಗೆ ಹೇಮಾವತಿ ನದಿ ನೀರನ್ನು ಹರಿಸುವ ಭರವಸೆ ನೀಡುತ್ತೇನೆ. ಮದಲೂರು ಕೆರೆ ಸೇರಿದಂತೆ 60 ಕೆರೆಗಳ ನೀರು ತುಂಬಿಸುವ ಆಶ್ವಾಸನೆಯನ್ನು ನೀಡಿದ್ದಾರೆ.

ಇದಲ್ಲದೆ ಮೊದಲು ಊರಿನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ವಸತಿ ಸ್ಕೀಂ ಗಳ ಅಡಿ ಮನೆ ಕೇಳುತ್ತಿರುವ ಫಲಾನುಭವಿಗಳಿಗೆ 5 ಲಕ್ಷ ರೂ. ನೀಡುವ ಭರವಸೆ ಕೊಟ್ಟಿದ್ದಾರೆ. ಒಕ್ಕಲಿಗ ಸಮುದಾಯದ ಭಾಗವಾಗಿರುವ ಕುಂಚಿಟಿಗ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ 2ಬಿ ನೋಡಿ ನಿಮಗೆ ಮೀಸಲಾತಿ ಸೌಲಭ್ಯ ಕಲ್ಪಿಸುತ್ತೇವೆ ಎಂಬ ಆಶ್ವಾಸನೆ ನೀಡಿದ್ದಾರೆ.

ಕೇಂದ್ರ ಸಚಿವಸದಾನಂದ ಗೌಡ ಈ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಈ ರೀತಿ ಅಶ್ವಾಸನೆ ನೀಡುವುದು ಭಾರತೀಯ ದಂಡ ಸಂಹಿತೆ ಪ್ರಕಾರ ಅಪರಾಧ ಆಗಲಿದೆ. ಈ ಕಾರಣದಿಂದ ಇಂತಹ ಹೇಳಿಕೆ ನೀಡಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಜನರಿಗೆ ಆಮಿಷ ಒಡ್ಡಿದ್ದಾರೆ ಎಂಬ ದೂರು ನೀಡಿದ್ದೇವೆ. ಕ್ಷೇತ್ರ ವ್ಯಾಪ್ತಿಯಲ್ಲಿ 1ಲಕ್ಷ ಮನೆಗಳಿದ್ದು ಇದರಲ್ಲಿ ತಮಗೆ ಮತ ನೀಡುವ ನಾಗರಿಕರು ವಾಸವಾಗಿರುವ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯ ಮಾಡಿದ್ದಾರೆ.

ಪ್ರತಿ ಸ್ಟಿಕ್ಕರ್ ಗೆ ಹತ್ತರಿಂದ ಹದಿನೈದು ರೂಪಾಯಿ ವ್ಯಯಿಸಿದ್ದು ಇದನ್ನ ಚುನಾವಣಾ ಆಯೋಗದ ಖರ್ಚಿನ ದೈನಂದಿನ ವೆಚ್ಚದಲ್ಲಿ ತೋರಿಸಿಲ್ಲ. ಇದು ಕಾನೂನು ಪ್ರಕಾರ ಅಪರಾಧ ಆಗಲಿದೆ. ಹೀಗಾಗಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದೇವೆ. ಇದಕ್ಕಾಗಿ ವೆಚ್ಚ ಮಾಡಿರುವ 20ರಿಂದ 25 ಲಕ್ಷ ರೂಪಾಯಿ ಮೊತ್ತವನ್ನು ಅವರ ಖಾತೆಗೆ ಸೇರಿಸಿ ಜಮಾ ಪಡೆಯಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.

ಮೂರನೇ ದೂರು ಆರ್ ಅಶೋಕ್ ಸೇರಿದಂತೆ ನಾಲ್ವರು ಸಚಿವರ ವಿರುದ್ಧ ನೀಡಿದ್ದೇವೆ. ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಂದರ್ಭ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸಂದರ್ಭ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ, ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ವಿಚಾರ ಮಾತನಾಡುತ್ತಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ದಮ್ಮು ನಮಗಿದೆ ಎಂದು ಹೇಳಿದ್ದಾರೆ.

ಈ ಮೂಲಕ ಬಿಜೆಪಿ ನಾಯಕರು ನಮಗೆ ಮತ ನೀಡದಿದ್ದರೆ ದೇವರ ಅವಕೃಪೆಗೆ ಗುರಿಯಾಗುವಿರಿ ಎನ್ನುವ ಭಾವನೆಯನ್ನು ಬಿತ್ತುವ ಕಾರ್ಯ ಮಾಡಿದ್ದಾರೆ. ಇದು ಕಾನೂನು ಪ್ರಕಾರ ಅಪರಾಧ ಆಗಲಿದೆ.

ಹೀಗಾಗಿ ಕುಮ್ಮಕ್ಕು ನೀಡಿರುವ ಸಚಿವರು ಮುಖ್ಯಮಂತ್ರಿ ಕೇಂದ್ರ ಸಚಿವ ಹಾಗೂ ಎರಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಚುನಾವಣಾ ಆಯೋಗ ಸಹ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ವಿವರಿಸಿದರು.

Last Updated : Oct 31, 2020, 6:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.