ETV Bharat / state

ಪರಿಷತ್ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ : 30ಕ್ಕೂ ಹೆಚ್ಚು ಅಧಿಕಾರಿಗಳನ್ನ ಎತ್ತಂಗಡಿ ಮಾಡಿದ ಸಭಾಪತಿಗಳು - ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಪರಿಷತ್ ಸಚಿವಾಲಯದಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಆಡಳಿತ ಯಂತ್ರ ಚುರುಕು ಕಳೆದುಕೊಂಡಿದೆ ಎಂಬ ಕೂಗು ಕೇಳಿ ಬರುತ್ತಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡ ಸಭಾಪತಿ ಹೊರಟ್ಟಿ ಅವರು, ಸಚಿವಾಲಯದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆ ಮೂಲಕ ಪರಿಷತ್ ಸಚಿವಾಲಯಕ್ಕೆ ಚುರುಕು ಮೂಡಿಸಲು ಮುಂದಾಗಿದ್ದಾರೆ..

Basavaraja horatti
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
author img

By

Published : Aug 20, 2021, 9:17 PM IST

ಬೆಂಗಳೂರು : ವಿಧಾನಪರಿಷತ್ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ವಿಧಾನ ಪರಿಷತ್ತಿನ 30ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸಚಿವಾಲಯದ ಆಡಳಿತಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾಗಿದ್ದಾರೆ. ಉಪಕಾರ್ಯದರ್ಶಿ, ಅಧೀನ ಕಾರ್ಯದರ್ಶಿ ಶಾಖಾಧಿಕಾರಿಗಳು, ಹಿರಿಯ ಸಹಾಯಕರು, ಸಹಾಯಕರು ಮತ್ತು ಕಿರಿಯ ಸಹಾಯಕರನ್ನೊಳಗೊಂಡ ಅಧಿಕಾರಿಗಳನ್ನು ಬೇರೆ ಬೇರೆ ವಿಭಾಗಗಳಿಗೆ ವರ್ಗಾಯಿಸಲಾಗಿದೆ.

ಪರಿಷತ್ ಸಚಿವಾಲಯದಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಆಡಳಿತ ಯಂತ್ರ ಚುರುಕು ಕಳೆದುಕೊಂಡಿದೆ ಎಂಬ ಕೂಗು ಕೇಳಿ ಬರುತ್ತಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡ ಸಭಾಪತಿ ಹೊರಟ್ಟಿ ಅವರು, ಸಚಿವಾಲಯದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆ ಮೂಲಕ ಪರಿಷತ್ ಸಚಿವಾಲಯಕ್ಕೆ ಚುರುಕು ಮೂಡಿಸಲು ಮುಂದಾಗಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಆದೇಶ : ಪ್ರಭಾವಿಗಳ ಒತ್ತಡ, ಪ್ರಭಾವ ಬಳಸಿ ಹಲವು ಸಿಬ್ಬಂದಿ ಸಚಿವಾಲಯದ ಆಯಕಟ್ಟಿನ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅಂತಹ ಕೆಲ ಸಿಬ್ಬಂದಿ ಬಗ್ಗೆ ಹಲವು ದೂರು ಕೇಳಿ ಬಂದಿದ್ದವು.

ಇವೆಲ್ಲವುಗಳನ್ನು ಪರಿಗಣಿಸಿ ಸಭಾಪತಿ ಬಸವರಾಜ ಹೊರಟ್ಟಿ ದಿಢೀರನೇ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದಾರೆ. ಹಣ, ಅಧಿಕಾರ ದುರುಪಯೋಗ ಕುರಿತ ದೂರುಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಓದಿ: ಬೆಂಗಳೂರು: ಹಾಡಹಗಲೇ ಚಾಕುವಿನಿಂದ ಕತ್ತು ಸೀಳಿ ದಂಪತಿಯ ಬರ್ಬರ ಹತ್ಯೆ.. 4 ವಿಶೇಷ ತನಿಖಾ ತಂಡ ರಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.