ಬೆಂಗಳೂರು : ನಗರದಲ್ಲಿ ಇಂದು 3,082 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಸೋಂಕಿಗೆ 26 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 2,715 ದಾಟಿದೆ.
ನಗರದ ಒಟ್ಟು ಕೋವಿಡ್ ಪಾಸಿಟಿವ್ ಸಂಖ್ಯೆ 2,00,728ಕ್ಕೆ ಏರಿಕೆಯಾಗಿದೆ. ಇಂದು 4,145 ಮಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 1,58,029 ಮಂದಿ ಗುಣಮುಖರಾಗಿದ್ದಾರೆ. ಸದ್ಯ 39,983 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 259 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.