ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ ಕೊರೊನಾ ಅಬ್ಬರ ಜೋರಾಗಿದ್ದು, ಇಂದು ಕೂಡ 3,176 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿಂದು 87 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲೇ 1,975 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ 929 ಜನರು ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 25,839 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ ದಾಖಲೆಯ 3,176 ಹೊಸ ಕೇಸ್ ದೃಢಪಟ್ಟಿದ್ದು, 87 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲೇ 1,975 ಪ್ರಕರಣಗಳು ವರದಿಯಾಗಿದ್ದು, 60 ಜನರು ಸಾವನ್ನಪ್ಪಿದ್ದಾರೆ. ಇದರಿಂದ ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253ಕ್ಕೇರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,076 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 18,466 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾಗಿ ತಿಳಿದು ಬಂದಿದೆ. ಉಳಿದಂತೆ 25,839 ಸಕ್ರಿಯ ಪ್ರಕರಣಗಳಿವೆ.