ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು 3189 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ 13,8701 ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾ ಸೋಂಕಿಗೆ 29 ಮಂದಿ ಮೃತಪಟ್ಟಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 2066 ಆಗಿದೆ.
ನಗರದಲ್ಲಿಂದು 2631ಜನರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 96194 ಜನರು ಗುಣಮುಖರಾದಂತಾಗಿದೆ. ಸದ್ಯ 40440 ಸಕ್ರಿಯ ಪ್ರಕರಣಗಳಿವೆ.
ಒಟ್ಟು 276 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ ಪಾಸಿಟಿವಿಟಿ ಪ್ರಮಾಣ ಶೇಕಡಾ 14.74 ಇದೆ. ಮರಣ ಪ್ರಮಾಣ 1.90 ಇದೆ.