ETV Bharat / state

ರಾಜ್ಯದಲ್ಲಿ 32,000 ಕೋಟಿ ರೂ. ಹೂಡಿಕೆ ಮಾಡಿದ ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾ

ರಾಜ್ಯ ಸರ್ಕಾರದ ಜೊತೆ ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾ ಕಂಪನಿಗಳು ಹೂಡಿಕೆ ಮಾಡುವುದಾಗಿ ಒಪ್ಪಂದಕ್ಕೆ ಸಹಿ ಹಾಕಿವೆ. ಇವು 32,200 ಕೋಟಿ ಹೂಡಿಕೆ ಮಾಡಲಿದ್ದು, 9 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ.

Agreement signed at CM Home Office Krishna

author img

By

Published : Jul 5, 2022, 8:00 PM IST

ಬೆಂಗಳೂರು: ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಅಲ್ಲದೇ 9 ಸಾವಿರ ಉದ್ಯೋಗಾವಕಾಶ ಸೃಷ್ಟಿಯ ಭರವಸೆ ನೀಡಿದೆ‌. ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

Agreement signed at CM Home Office Krishna
ಹೂಡಿಕೆ ಸಂಬಂಧ ಒಪ್ಪಂದಕ್ಕೆ ಸಹಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ, ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಪೆಟ್ರೋನಾಸ್ ಹೈಡ್ರೋಜನ್ ಸಿಇಒ ಅದ್ಲಾನ್ ಅಹ್ಮದ್, ಕಾಂಟಿನೆಂಟಲ್ ಇಂಡಿಯಾದ ಸಿಇಒ ಪ್ರಶಾಂತ್ ದೊರೆಸ್ವಾಮಿ ತಮ್ಮ ಕಂಪನಿ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದರು.

32,200 ಕೋಟಿ ರೂ. ಹೂಡಿಕೆ: ಈ ಸಂದರ್ಭದಲ್ಲಿ ರಾಜ್ಯದೊಂದಿಗೆ ಮಾಡಿಕೊಂಡಿರುವ ಈ ಹೂಡಿಕೆ ಒಪ್ಪಂದ ನಿಗದಿತ ಅವಧಿಯಲ್ಲಿ ಜಾರಿಗೆ ಬರುವಂತಾಗಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿಗಳು ಎರಡೂ ಕಂಪನಿಗಳ ಮುಖ್ಯಸ್ಥರಿಗೆ ತಿಳಿಸಿದರು. ಪೆಟ್ರೋನಾಸ್ ಹೈಡ್ರೋಜನ್ ಸಂಸ್ಥೆಯು ಮಂಗಳೂರಿನಲ್ಲಿ ನವೀಕರಿಸಬಹುದಾದ ಇಂಧನ ಘಟಕವನ್ನು ಸ್ಥಾಪಿಸಲು 31,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ಸಹಿ ಹಾಕಿದೆ. ಇದರಿಂದ 3,000 ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.

ಕಾಂಟಿನೆಂಟಲ್ ಇಂಡಿಯಾ ತನ್ನ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಮೂಲಕ 1,000 ಕೋಟಿ ರೂ. ಬಂಡವಾಳ ಹೂಡಲಿದೆ. ಇದರಿಂದ 6,000 ಜನರಿಗೆ ಉದ್ಯೋಗ ದೊರೆಯಲಿದೆ. ಆಟೋಮೋಟಿವ್ ಸಾಫ್ಟ್ವೇರ್ ಅಭಿವೃದ್ಧಿ, ಸಂವಹನ ತಂತ್ರಜ್ಞಾನ ಉದ್ಯಮದಲ್ಲಿ ತೊಡಗಿರುವ ಟೆಕ್ ಕಂಪನಿ ಕಾಂಟಿನೆಂಟಲ್ - ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಟೆಕ್ನಿಕಲ್ ಸೆಂಟರ್ ಇಂಡಿಯಾ (ಟಿಸಿಐ) ಯ ವಿಸ್ತರಣೆಗಾಗಿ 1,000 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದೆ. ಬೆಂಗಳೂರಿನಲ್ಲಿ ಬೆಳೆಯುತ್ತಿರುವ ಆಟೋಮೋಟಿವ್ ಆರ್ ಅಂಡ್ ಡಿ ಪರಿಸರ ವ್ಯವಸ್ಥೆಗೆ ಈ ಪ್ರಸ್ತಾವಿತ ಹೂಡಿಕೆ ಪೂರಕವಾಗಲಿದೆ.

ಇದನ್ನೂ ಓದಿ: ಯಾಕೆ ಈ ಮೀಟಿಂಗ್​.. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಸರಣಿ ಸಭೆ..!

ನವೀಕರಿಸಬಹುದಾದ ಇಂಧನ ವಲಯ: ಕರ್ನಾಟಕ ಮುಂಚೂಣಿಯಲ್ಲಿ ಇತ್ತೀಚೆಗೆ ಸ್ವಿಟ್ಜರ್ಲೆಂಡ್​ನ ದಾವೊಸ್ ನಲ್ಲಿ ರೆನ್ಯೂ ಪವರ್ ಕಂಪನಿಯವರು ನವೀಕರಿಸಬಹುದಾದ ಇಂಧನ ವಲಯದಲ್ಲಿ 50,000 ಕೋಟಿ ರೂ. ಹೂಡಿಕೆ ಒಪ್ಪಂದ ಮಾಡಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು.

ಜತೆಗೆ, ಆಕ್ಮೆ ( ACME ) ಕ್ಲೀನ್ ಟೆಕ್ ಸಲ್ಯುಷನ್ಸ್ ಕಂಪೆನಿ ಮಂಗಳೂರಿನಲ್ಲಿ ಹೈಡ್ರೋಜನ್ ಮತ್ತು ಅಮೋನಿಯಾ ಘಟಕ ಹಾಗೂ ಪೂರಕವಾಗಿ ಸೋಲಾರ್ ಘಟಕ ಸ್ಥಾಪನೆಗೆ 52 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಕಳೆದ ತಿಂಗಳು ಒಪ್ಪಂದ ಮಾಡಿಕೊಂಡಿತ್ತು. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.