ETV Bharat / state

ರಾಜ್ಯದಲ್ಲಿ ಪ್ರವಾಹದಿಂದ 32 ಸಾವಿರ ಕೋಟಿ ರೂ. ನಷ್ಟ: ಸಿಎಂ ಯಡಿಯೂರಪ್ಪ - ಗೃಹ ಕಚೇರಿ ಕೃಷ್ಣಾ

ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಅಧ್ಯಯನ ತಂಡದ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಿಎಂ ಬಿ.ಎಸ್​.ಯಡಿಯೂರಪ್ಪ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಅಂದಾಜು 32 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಅಧ್ಯಯನ ತಂಡ ಬಂದು ಪರಿಶೀಲನೆ ನಡೆಸಿದೆ ಎಂದರು.

ಸಿಎಂ ಬಿ.ಎಸ್​. ಯಡಿಯೂರಪ್ಪ
author img

By

Published : Aug 27, 2019, 9:39 PM IST

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಅಂದಾಜು 32 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಅಧ್ಯಯನ ತಂಡ ಬಂದು ಪರಿಶೀಲನೆ ನಡೆಸಿದೆ. ಹೆಚ್ಚಿನ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಮನಗಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಅಧ್ಯಯನ ತಂಡದ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಸಿಎಂ, ಪ್ರವಾಹ ಮತ್ತು ನಷ್ಟದ ಬಗ್ಗೆ ನಾವು ಅವರಿಗೆ ಮಾಹಿತಿ ನೀಡಿದ್ದೇವೆ ಎಂದರು.

ಇಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಪರಿಶೀಲನೆ ನಡೆಸಿ, ಈಗ ಸಭೆ ನಡೆಸಿದ್ದೇನೆ. ಹಣಕಾಸಿನ ಪರಿಸ್ಥಿತಿ ಸರಿ ಇರಲಿ ಬಿಡಲಿ, ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ನೀಡುವ ಕೆಲಸ ಮಾಡುತ್ತೇವೆ. ಈಗಾಗಲೇ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಿಎಂ ಬಿ.ಎಸ್​.ಯಡಿಯೂರಪ್ಪ

ಎತ್ತರ ಪ್ರದೇಶದಲ್ಲಿ ಪುನರ್ವಸತಿ ಕಲ್ಪಿಸುವ ಕೆಲಸ ಮಾಡಬೇಕಿದೆ. ತಾತ್ಕಾಲಿಕ ಶೆಡ್ ಮಾಡಿ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಸಿಎಂ, ರಾಜ್ಯದಲ್ಲಿ 22 ಜಿಲ್ಲೆಗಳ 103 ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ. 87 ಮಂದಿ ಸಾವನ್ನಪ್ಪಿದ್ದಾರೆ. 7 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. 2.47 ಲಕ್ಷ ಮನೆಗಳು ಹಾನಿಯಾಗಿವೆ. ಇದರಲ್ಲಿ 1.79 ಲಕ್ಷ ಮನೆಗಳು ಸಂಪೂರ್ಣ ಹಾನಿಯಾಗಿವೆ. ಸುಮಾರು 22 ಸಾವಿರ ಕಿ.ಮೀ. ರಸ್ತೆ, 2827 ಸೇತುವೆ, 57 ಸಾವಿರ ವಿದ್ಯುತ್ ಕಂಬಗಳು, 8 ಲಕ್ಷ 20 ಸಾವಿರ ಹೆಕ್ಟೇರ್​​ನಲ್ಲಿ ಬೆಳೆ ನಷ್ಟವಾಗಿದೆ ಎಂದು ವಿವರಿಸಿದರು.

ನಾಲ್ಕು ದಿನದ ನಂತರ ನಮ್ಮ ಮಂತ್ರಿ ಮಂಡಲದ ಸಚಿವರು ಮತ್ತೊಮ್ಮೆ ಪ್ರಧಾನಿ ಭೇಟಿ ಮಾಡುವ ತೀರ್ಮಾನ ಮಾಡಿದ್ದೇವೆ. ಈ ಮೊದಲು ರಾಜ್ಯಕ್ಕೆ ಬಂದಿರುವ ಈ ತಂಡ ಕೇಂದ್ರಕ್ಕೆ ಅಧ್ಯಯನ ವರದಿ ನೀಡಲಿ. ಬಳಿಕ ನಾವು ಹೋಗುತ್ತೇವೆ ಎಂದು ಹೇಳಿದರು. ಕೇಂದ್ರದ ಅಧ್ಯಯನ ತಂಡಕ್ಕೆ ಮನವರಿಕೆಯಾಗಿದ್ದು, ಕೇಂದ್ರದಿಂದ ಸಾಕಷ್ಟು ಪರಿಹಾರ ಸಿಗುವ ನಿರೀಕ್ಷೆ ಇದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Intro:ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಅಂದಾಜು 32 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಅಧ್ಯಯನ ತಂಡ ಬಂದು ಪರಿಶೀಲನೆ ನಡೆಸಿದೆ. ಹೆಚ್ಚಿನ ಹಾನಿ ಯಾಗಿರುವ ಬಗ್ಗೆ ಅಧಿಕಾರಿಗಳು ಮನಗಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. Body:ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಅಧ್ಯಯನ ತಂಡದ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರವಾಹ ಮತ್ತು ನಷ್ಟದ ಬಗ್ಗೆ ನಾವು ಅವರಿಗೆ ಮಾಹಿತಿ ನೀಡಿದ್ದೇವೆ ಎಂದರು.
ಇಂದು ಚಿಕ್ಕಮಗಳೂರು ಜಿಲ್ಲೆಯ ಮುಡಿಗೆರೆಯಲ್ಲಿ ಪರಿಶೀಲನೆ ನಡೆಸಿ ಈಗ ಸಭೆ ನಡೆಸಿದ್ದೇನೆ. ಹಣಕಾಸಿನ ಪರಿಸ್ಥಿತಿ ಸರಿ ಇರಲಿ ಬಿಡಲಿ, ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ನೀಡುವ ಕೆಲಸ ಮಾಡುತ್ತೇವೆ. ಈಗಾಗಲೇ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಎತ್ತರ ಪ್ರದೇಶದಲ್ಲಿ ಪುನರ್ವಸತಿ ಕಲ್ಪಿಸುವ ಕೆಲಸ ಮಾಡಬೇಕಿದೆ. ತಾತ್ಕಾಲಿಕ ಶೆಡ್ ಮಾಡಿ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಸಿಎಂ, ರಾಜ್ಯದಲ್ಲಿ 22 ಜಿಲ್ಲೆಗಳ 103 ತಾಲೂಕುಗಳು ಪ್ರವಾಹ ಪೀಡಿತಕ್ಕೆ ಸಿಲುಕಿವೆ. 87 ಮಂದಿ ಸಾವನ್ನಪ್ಪಿದ್ದಾರೆ, 7 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. 2.47 ಲಕ್ಷ ಮನೆಗಳು ಹಾನಿಯಾಗಿದೆ. ಇದರಲ್ಲಿ 1.79 ಲಕ್ಷ ಮನೆಗಳು ಸಂಪೂರ್ಣ ಹಾನಿಯಾಗಿದೆ. ಸುಮಾರು 22 ಸಾವಿರ ಕಿ.ಮೀ ರಸ್ತೆ, 2827 ಸೇತುವೆ, 57 ಸಾವಿರ ವಿದ್ಯುತ್ ಕಂಬಗಳು. 8 ಲಕ್ಷ 20 ಸಾವಿರ ಹೆಕ್ಟೇರ್ ನಲ್ಲಿ ಬೆಳೆ ನಷ್ಟವಾಗಿದೆ ಎಂದು ವಿವರಿಸಿದರು.
ನಾಲ್ಕು ದಿನದ ನಂತರ ನಮ್ಮ ಮಂತ್ರಿ ಮಂಡಲದ ಸಚಿವರು ಮತ್ತೊಮ್ಮೆ ಪ್ರಧಾನಿ ಭೇಟಿ ಮಾಡುವ ತೀರ್ಮಾನ ಮಾಡಿದ್ದೇವೆ. ಈ ಮೊದಲು ರಾಜ್ಯಕ್ಕೆ ಬಂದಿರುವ ಈ ತಂಡ ಕೇಂದ್ರಕ್ಕೆ ಅಧ್ಯಯನ ವರದಿ ನೀಡಲಿ. ಬಳಿಕ ನಾವು ಹೋಗುತ್ತೇವೆ ಎಂದು ಹೇಳಿದರು.
ಕೇಂದ್ರದ ಅಧ್ಯಯನ ತಂಡಕ್ಕೆ ಮನವರಿಕೆಯಾಗಿದ್ದು, ಕೇಂದ್ರದಿಂದ ಸಾಕಷ್ಟು ಪರಿಹಾರ ಸಿಗುವ ನಿರೀಕ್ಷೆ ಇದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ,
ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ. ರಾಘವೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.