ಬೆಂಗಳೂರು: ಲಾಕ್ಡೌನ್ ಬಳಿಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂದು 32,218 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 353 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
52,518 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 18,29,276 ಮಂದಿ ಚೇತರಿಸಿಕೊಂಡಿದ್ದಾರೆ. 5,14,238 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 23,67,742ಕ್ಕೆ ಏರಿಕೆಯಾಗಿದ್ದು, ಈವರೆಗೆ 24,207 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.