ಬೆಂಗಳೂರು: ಹೊಸ ವರ್ಷಾಚರಣೆಯ ಪಾರ್ಟಿ ಮೂಡ್ನಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದವರಿಗೆ ಬೆಂಗಳೂರು ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ತಡರಾತ್ರಿ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ಬೆಂಗಳೂರು ನಗರ ಸಂಚಾರಿ ಪೊಲೀಸರು, ಹೊಸ ವರ್ಷ ವೆಲ್ಕಮ್ ಮಾಡಿಕೊಳ್ಳುವ ಭರದಲ್ಲಿ ಜವಾಬ್ದಾರಿ ಮರೆತು ಪಾನಮತ್ತರಾಗಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ 330 ಪ್ರಕರಣಗಳನ್ನು ದಾಖಲಿಸಿದ್ದಾರೆ.
330 ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲು: ವರ್ಷಾಂತ್ಯ ಸಮೀಪಿಸುವುದಕ್ಕೂ ಒಂದು ವಾರ ಮೊದಲಿನಿಂದಲೇ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು ಕಳೆದ ರಾತ್ರಿ ಒಟ್ಟು 7,620 ವಾಹನಗಳನ್ನು ತಪಾಸಣೆ ಮಾಡಿ 330 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳನ್ನ ದಾಖಲಿಸಿಕೊಂಡಿದ್ದಾರೆ. ಡ್ರಂಕ್ ಅಂಡ್ ಡ್ರೈವ್ ಮಾಡುವವರು ವಿರುದ್ಧ ಡಿಸೆಂಬರ್ 21ರಿಂದಲೇ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದ ಬೆಂಗಳೂರು ಸಂಚಾರಿ ಪೊಲೀಸರು ಡಿಸೆಂಬರ್ 30ರ ವರೆಗೆ 27,280 ವಾಹನಗಳನ್ನು ತಪಾಸಣೆಗೊಳಪಡಿಸಿ 717 ಪ್ರಕರಣಗಳನ್ನ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹2 ಕೋಟಿ ಮೌಲ್ಯದ ಚಿನ್ನ ವಶಕ್ಕೆ