ಬೆಂಗಳೂರು : ರಾಜಧಾನಿಯಲ್ಲಿ ಇಂದು 3547 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಇಂದಿನ ಕೋವಿಡ್ ವಿವರ : ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣ ಸೇರಿದಂತೆ ನಗರದಲ್ಲಿ ಒಟ್ಟು ಪ್ರಕರಣ ಸಂಖ್ಯೆ 2,04,275ಕ್ಕೆ ಏರಿಕೆಯಾಗಿವೆ.
ಮೃತರ ಮಾಹಿತಿ : ಕೊರೊನಾ ಸೋಂಕಿಗೆ ಈ ದಿನ 23 ಜನರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 2,738ಕ್ಕೆ ಏರಿಕೆಯಾಗಿದೆ.
ಗುಣಮುಖ : ನಗರದಲ್ಲಿ ಕೊರೊನಾ ಸೋಂಕಿನಿಂದ ಇಂದು 3536 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 1,61,565 ಮಂದಿ ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳಿಷ್ಟು.. : ಸಿಲಿಕಾನ್ ಸಿಟಿಯಲ್ಲಿ 39,971 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 359 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.