ETV Bharat / state

3773 ಮಂದಿ 80 ವರ್ಷ ಮೇಲ್ಪಟ್ಟವರು, 46 ಮಂದಿ ವಿಶೇಷ ಚೇತನರಿಂದ ಮತದಾನ - ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶನಿವಾರ 80ವರ್ಷ ಮೆಲ್ಪಟ್ಟ 3727 ಮತದಾರರು ಮತ್ತು 46 ಮಂದಿ ವಿಶೇಷಚೇತನರು ತಮ್ಮ ಮತ ಚಲಾಯಿಸಿದ್ದಾರೆ.

3773-aged-and-handicapped-using-postal-ballot-to-cast-vote
3773 ಮಂದಿ 80 ವರ್ಷ ಮೇಲ್ಪಟ್ಟವರು, 46 ಮಂದಿ ವಿಶೇಷ ಚೇತನರಿಂದ ಮತದಾನ
author img

By

Published : Apr 29, 2023, 11:03 PM IST

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಶನಿವಾರ 3773 ಮಂದಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮತ ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ನಗರದದಲ್ಲಿ 80 ವರ್ಷ ಮೇಲ್ಪಟ್ಟವರು 2,35,140 ಮತದಾರರಿದ್ದು, 9,152 ಮಂದಿ ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಜೊತೆಗೆ ವಿಶೇಷ ಚೇತನರು 26,058 ಮತದಾರರಿದ್ದು, 119 ಮಂದಿ ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

ಈ ಪೈಕಿ ಮೊದಲ ದಿನ 3727 ಮಂದಿ 80 ವರ್ಷ ಮೇಲ್ಪಟ್ಟವರು ಹಾಗೂ 46 ಮಂದಿ ವಿಶೇಷ ಚೇತನರು ಸೇರಿದಂತೆ ಒಟ್ಟು 3773 ಮಂದಿ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. 80 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 29 ರಿಂದ ಮೇ 6 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸುತ್ತದೆ.

ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಯಿಡಿಯಲಾಗುತ್ತದೆ ಎಂದು ಮಾಹಿತಿ ನೀಡಿದೆ. ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಿದ್ದಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿ ನೀಡುತ್ತಿದ್ದಾರೆ.

ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ. ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದೆ. ಯಾವುದೆ ತೊಂದರೆ ಅಡೆತಡೆಗಳಲ್ಲಿದೆ ಎಲ್ಲ ಕಡೆ ಸುಸೂತ್ರವಾಗಿ, ನಿಯಮಬದ್ಧವಾಗಿ, ಯಶಸ್ವಿಯಾಗಿ ಮನೆ ಮನೆಗೆ ತೆರಳಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೆತನರ ಮತದಾನವನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಹೇಳಿದೆ.

ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ: ಮತದಾನ ಮಾಡಿದ ಹಿರಿಯ ನಟಿ ಡಾ. ಎಂ. ಲೀಲಾವತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.