ETV Bharat / state

ಬೆಂಗಳೂರಿನ ಜಿಕೆವಿಕೆಯಲ್ಲಿ 380 ಹಾಸಿಗೆ ಸಾಮರ್ಥ್ಯವುಳ್ಳ ಕೋವಿಡ್ ಆರೈಕೆ ಕೇಂದ್ರ - ಜಿಕೆವಿಕೆ ಕೊರೊನಾ ಕೇಂದ್ರ

ಬಿಬಿಎಂಪಿಯ ಕೋರಿಕೆ ಮೇರೆಗೆ ಯಲಹಂಕ ವಲಯದಿಂದ ಕೋವಿಡ್ -19 ಆರೈಕೆ ಕೇಂದ್ರವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ನಿಲಯದ ಕಟ್ಟಡದಲ್ಲಿ ಸ್ಥಾಪಿಸಲಾಗುತ್ತಿದೆ‌.

ಬಿಸಿ ಪಾಟೀಲ್
ಬಿಸಿ ಪಾಟೀಲ್
author img

By

Published : May 6, 2021, 3:36 PM IST

ಬೆಂಗಳೂರು: ಜಿಕೆವಿಕೆಯ ವಿದ್ಯಾರ್ಥಿನಿಯರ ನಿಲಯವನ್ನು ಕೋವಿಡ್-19 ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ.

ಬಿಬಿಎಂಪಿಯ ಕೋರಿಕೆ ಮೇರೆಗೆ ಯಲಹಂಕ ವಲಯದಿಂದ ಕೋವಿಡ್-19 ಆರೈಕೆ ಕೇಂದ್ರವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ನಿಲಯದ ಕಟ್ಟಡದಲ್ಲಿ ಸ್ಥಾಪಿಸಲಾಗುತ್ತಿದೆ‌.

ಪ್ರಕೃತಿ ವಿಕೋಪ ಅಧಿನಿಯಮ 2005 ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅಧಿನಿಯಮದಡಿಯಲ್ಲಿ ಪ್ರಸ್ತಾಪಿತ ಕಟ್ಟಡವನ್ನು ಕೃಷಿ ಸಚಿವರ ಸೂಚನೆ ಮೇರೆಗೆ ಪಾಲಿಕೆಯ ಯಲಹಂಕ ವಲಯಕ್ಕೆ ಹಸ್ತಾಂತರಿಸಲಾಗಿದೆ.

ಜಿಕೆವಿಕೆಯ ಈ ವಿದ್ಯಾರ್ಥಿನಿಯರ ನಿಲಯವು ಕೋವಿಡ್ ಸೋಂಕಿತರ ಆರೈಕೆಗಾಗಿ ಸುಮಾರು 380 ಬೆಡ್‌ಗಳ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ 30 ಹಾಸಿಗೆ ಸಾಮರ್ಥ್ಯವುಳ್ಳ "ಇಂಟರ್‌ನ್ಯಾಷನಲ್ ಸ್ಟಾಫ್ ಕ್ವಾಟ್ರಸ್​" ಅನ್ನು ಕೋವಿಡ್ ವಾರಿಯರ್ಸ್‌ ಅಂದರೆ ವೈದ್ಯಕೀಯ ಸಿಬ್ಬಂದಿಗಾಗಿ ಮೀಸಲಿಡಲಾಗಿದೆ.

ಕಳೆದ ಬಾರಿಯೂ ಸಹ ಜಿಕೆವಿಕೆಯಲ್ಲಿ ಕೋವಿಡ್ ಆರೈಕೆಗಾಗಿ ವಿದ್ಯಾರ್ಥಿನಿಯರ ನಿಲಯವನ್ನು ನೀಡಲಾಗಿತ್ತು. ಇದಕ್ಕಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಬೆಂಗಳೂರು ಜಿಕೆವಿಕೆ ಉಪಕುಲಪತಿ ರಾಜೇಂದ್ರಪ್ರಸಾದ್ ಹಾಗೂ ಬಿಬಿಎಂಪಿಗೆ ಧನ್ಯವಾದ ಸಲ್ಲಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.