ಬೆಂಗಳೂರು: ವ್ಹೀಲಿಂಗ್ ಮಾಡಿ ಅಮೂಲ್ಯವಾದ ಪ್ರಾಣವನ್ನ ಕಳೆದುಕೊಳ್ಳಬೇಡಿ ಎಂದು ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಪುಡಾರಿಗಳು ಮಾತ್ರ ಬುದ್ಧಿ ಕಲಿಯುತ್ತಿಲ್ಲ.
ಇದಕ್ಕೆ ಉದಾಹರಣೆ ಎಂಬಂತೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಅಪಾಯವಾಗುವಂತೆ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿದಿನ ವ್ಹೀಲಿಂಗ್ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಾಲ್ಕು ಜನರನ್ನ ಬಂಧಿಸಿದ್ದಾರೆ. ಚಂದನ್ (21), ಸುಮಂತ (20), ಲಿಖಿತ್ (21), ವಿನಯ್ ಬಂಧಿತರು.
ಆರೋಪಿಗಳ ವಿಚಾರಣೆ ನಡೆಸಿದಾಗ ಶೋಕಿಗಾಗಿ ಈ ರೀತಿ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದು, ಸದ್ಯ ಆರೋಪಿಗಳು ಈ ಹಿಂದೆಯೂ ಇತರರೊಂದಿಗೆ ಸೇರಿ ವೀಲ್ಹಿಂಗ್ ಮಾಡಿದ್ದಾರೆ ಎನ್ನಲಾಗಿದೆ.