ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಮೂವರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೈಕೋ ಲೇಔಟ್ ರಮಣಶ್ರೀ ಎನ್ಕ್ಲೇವ್ ಅಪಾರ್ಟ್ಮೆಂಟ್ವೊಂದರ ಮನೆಯಲ್ಲಿ ದುರಂತ ಸಂಭವಿಸಿದೆ. ನೇಪಾಳ ಮೂಲದ ಜನಕರಾಜ್ ಬಿಸ್ತಾ (32) ಮಕ್ಕಳಾದ ಸರಸ್ವತಿ (14), ಹೇಮತಿ (9) ಹಾಗೂ ರಾಜ್ ಕುಮಾರ್ (3) ರನ್ನು ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ರಮಣಶ್ರೀ ಎನ್ಕ್ಲೇವ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿತ್ತಿದ್ದ ಜನಕರಾಜ್ ಬಿಸ್ತಾ ಪತ್ನಿ ನಂದಾದೇವಿ ಎರಡು ತಿಂಗಳ ಹಿಂದೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಹೀಗಾಗಿ ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಜನಕರಾಜ್, ಮಕ್ಕಳಿಗೆ ನೇಣು ಹಾಕಿ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಕೋ ಲೇಔಟ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ನಗರದ ಆಗ್ನೇಯ ವಿಭಾಗದ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.