ಬೆಂಗಳೂರು : 43ನೇ ಆಕ್ಸಿಜನ್ ಎಕ್ಸ್‌ಪ್ರೆಸ್ ಇಂದು ಬೆಳಗ್ಗೆ 4:25ಕ್ಕೆ ಬೆಂಗಳೂರಿನ ವೈಟ್‌ಫೀಲ್ಡ್ ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಇದು 21ರಂದು ಬೆಳಗ್ಗೆ 10 : 20ಕ್ಕೆ ಗುಜರಾತ್‌ನ ಜಾಮ್‌ನಗರದಿಂದ ಪ್ರಾರಂಭವಾಗಿತ್ತು.
ಈ ರೈಲು 6 ಕ್ರಯೋಜೆನಿಕ್ ಕಂಟೇನರ್‌ಗಳಿಂದ 97 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸಾಗಿಸಿದೆ. ಭಾರತೀಯ ರೈಲ್ವೆ ಈವರೆಗೆ 448 ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳನ್ನು ನಡೆಸಿದೆ. 1,854 ಟ್ಯಾಂಕರ್‌ಗಳಲ್ಲಿ 32,464 ಟನ್‌ಗಳಷ್ಟು ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ಸಾಗಿಸಿದೆ.
ಕೋವಿಡ್-19 ವಿರುದ್ಧದ ಹೋರಾಟದಲ್ಲಿ 15 ರಾಜ್ಯಗಳಿಗೆ ಪರಿಹಾರವನ್ನು ನೀಡಿದೆ. ಈವರೆಗೆ ಕರ್ನಾಟಕವು ರೈಲ್ವೆ ಮೂಲಕ 4,623.31 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಪಡೆದಿದೆ.