ETV Bharat / state

70 ಟನ್ ಆಕ್ಸಿಜನ್ ಹೊತ್ತು ಬೆಂಗಳೂರಿಗೆ ಬಂದ 44ನೇ ಆಕ್ಸಿಜನ್ ಎಕ್ಸ್‌ಪ್ರೆಸ್ - ಬೆಂಗಳೂರಿಗೆ ಬಂದ 44ನೇ ಆಕ್ಸಿಜನ್ ಎಕ್ಸ್‌ಪ್ರೆಸ್

ಕೇಂದ್ರ ಸರ್ಕಾರ ಆಕ್ಸಿಜನ್ ಕಳುಹಿಸಿ ಕೊಟ್ಟ ನಂತರ ಕರ್ನಾಟಕದಲ್ಲಿ ಆಕ್ಸಿಜನ್ ಸಮಸ್ಯೆ ಕಡಿಮೆಯಾಗಿದೆ. ಸದ್ಯ ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರೆತೆಯಾಗದಂತೆ ರಾಜ್ಯ ಸರ್ಕಾರ ಕ್ರಮವಹಿಸಿದೆ..

bangalore
ಬೆಂಗಳೂರಿಗೆ ಬಂದ 44ನೇ ಆಕ್ಸಿಜನ್ ಎಕ್ಸ್‌ಪ್ರೆಸ್
author img

By

Published : Jul 2, 2021, 7:15 AM IST

ಬೆಂಗಳೂರು : 44ನೇ ಆಕ್ಸಿಜನ್ ಎಕ್ಸ್‌ಪ್ರೆಸ್ ಗುರುವಾರ ಮಧ್ಯಾಹ್ನ 4:20ಕ್ಕೆ ಬೆಂಗಳೂರಿನ ವೈಟ್‌ಫೀಲ್ಡ್, ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಈ ರೈಲು ಜೂನ್‌ 30 ರಂದು ಬೆಳಗ್ಗೆ 2:40ಕ್ಕೆ ಒಡಿಶಾದ ರೌರ್ಕೆಲಾದಿಂದ ಲೋಡ್ ಮಾಡಿಕೊಂಡು ಪ್ರಯಾಣ ಬೆಳೆಸಿತ್ತು. ಈ ರೈಲು 4 ಕ್ರಯೋಜೆನಿಕ್ ಕಂಟೇನರ್‌ಗಳಿಂದ 70 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್​​ ಸಾಗಿಸಿದೆ.

ಭಾರತೀಯ ರೈಲ್ವೆ ಈವರೆಗೆ 449 ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳನ್ನು ಸಾಗಿಸಿದೆ. ಒಟ್ಟು 1854 ಟ್ಯಾಂಕರ್‌ಗಳಲ್ಲಿ 32,534 ಟನ್‌ಗಳಷ್ಟು ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ಸಾಗಿಸಿರುವುದು ವಿಶೇಷ. ಕೋವಿಡ್ -19 ವಿರುದ್ಧದ ಹೋರಾಟದಲ್ಲಿ 15 ರಾಜ್ಯಗಳಿಗೆ ಪರಿಹಾರವನ್ನು ನೀಡಿದೆ. ಈವರೆಗೆ ಕರ್ನಾಟಕ ರೈಲ್ವೆ ಮೂಲಕ 4,6293.31 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಪಡೆದಿದೆ.

ಕೊರೊನಾ ಮೂರನೇ ಅಲೆ ಇನ್ನೂ ಕೆಲವು ತಿಂಗಳಲ್ಲಿ ದೇಶದಲ್ಲಿ ವ್ಯಾಪಕವಾಗಿ ಹರಡುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ದೇಶದ ಕೆಲವು ಪ್ರಮುಖ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ನೀಡುವ ಮೂಲಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ.

ಕೇಂದ್ರ ಸರ್ಕಾರ ಆಕ್ಸಿಜನ್ ಕಳುಹಿಸಿ ಕೊಟ್ಟ ನಂತರ ಕರ್ನಾಟಕದಲ್ಲಿ ಆಕ್ಸಿಜನ್ ಸಮಸ್ಯೆ ಕಡಿಮೆಯಾಗಿದೆ. ಸದ್ಯ ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರೆತೆಯಾಗದಂತೆ ರಾಜ್ಯ ಸರ್ಕಾರ ಕ್ರಮವಹಿಸಿದೆ. ಬೆಂಗಳೂರಿಗೆ ಆಗಮಿಸಿರುವ ವೈದ್ಯಕೀಯ ಆಮ್ಲಜನಕವನ್ನು ಅಗತ್ಯವಿರುವ ಆಸ್ಪತ್ರೆಗೆ ಸರಬರಾಜು ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಮ್ಲಜನಕವನ್ನು ಹಂಚಿಕೆ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.