ಬೆಂಗಳೂರು: ರಾಜ್ಯದಲ್ಲಿಂದು 1,00,511 ಮಂದಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, 4,439 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 8,02,817ಕ್ಕೆ ಏರಿಕೆ ಆಗಿದೆ. ಅಲ್ಲದೇ 32 ಸೋಂಕಿತರು ಕೊನೆಯುಸಿರೆಳೆಯುವ ಮೂಲಕ ಮೃತರ ಸಂಖ್ಯೆ 10,905ಕ್ಕೆ ತಲುಪಿದೆ.
ರಾಜ್ಯದಲ್ಲಿ 81,050 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 939 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 10,106 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 7,10,843 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಕಳೆದ 14 ದಿನಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 4,35,111 ಮಂದಿ ಹಾಗೂ ದ್ವಿತೀಯ ಸಂಪರ್ಕದಲ್ಲಿ 4,06,615 ಇದ್ದಾರೆ. ಕಳೆದ 7 ದಿನಗಳಲ್ಲಿ 73,948 ಜನರು ಹೋಂ ಕ್ವಾರಂಟೈನ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2,468 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 3,25,773ಕ್ಕೆ ಏರಿಕೆ ಆಗಿದೆ. 20 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 3,734ಕ್ಕೆ ತಲುಪಿದೆ. ಇಂದು 6,759 ಗುಣಮುಖರಾಗಿದ್ದು ಈವರೆಗೆ 2,70,366 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ನಗರದಲ್ಲಿ 51,672 ಸಕ್ರಿಯ ಪ್ರಕರಣಗಳು ಇವೆ.