ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಪ್ರಕಟಣೆ ಬಿಡುಗಡೆ ಮಾಡಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 8ರ ವರೆಗೆ ಕಾರ್ಯಾಚರಣೆ ನಡೆಸಿ 448 ವಾಹನಗಳನ್ನು ಜಪ್ತಿ ಮಾಡಿದ್ದಾರೆ.
429 ದ್ವಿಚಕ್ರ ವಾಹನ, 11 ಆಟೋ, 8 ಕಾರುಗಳನ್ನು ಸೀಜ್ ಮಾಡಲಾಗಿದ್ದು, 12 ಜನರ ವಿರುದ್ಧ ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘನೆಯ ಕೇಸ್ ಬುಕ್ ಮಾಡಿ ಎನ್ಡಿಎಂಎ ಅಡಿ ಎಫ್ಐಆರ್ ದಾಖಲಿಸಿದ್ದಾರೆ.