ETV Bharat / state

ರಾಜ್ಯದಲ್ಲಿ 474 ಕೋವಿಡ್​ ಪಾಸಿಟಿವ್ ಕೇಸ್​: ಸೋಂಕಿನ ಲಕ್ಷಣವಿಲ್ಲದ ಪೊಲೀಸ್ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ಕಡ್ಡಾಯ

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಪೊಲೀಸ್​ ಸಿಬ್ಬಂದಿಗೂ ಕೂಡ ಕಡ್ಡಾಯವಾಗಿ ಕೋವಿಡ್​-19 ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

author img

By

Published : Apr 24, 2020, 7:01 PM IST

Updated : Apr 24, 2020, 7:07 PM IST

covid-19
ಕೊರೊನಾ

ಬೆಂಗಳೂರು: ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಇಂದಿನಿಂದ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗುತ್ತಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಪೊಲೀಸ್​ ಸಿಬ್ಬಂದಿಗೂ ಕೂಡ ಕಡ್ಡಾಯವಾಗಿ ಕೋವಿಡ್​-19 ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 474 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 18 ಜನ ಸಾವನ್ನಪ್ಪಿದ್ದರಮ, 152 ಜನ ಗುಣಮುಖರಾಗಿದ್ದಾರೆ. ಉಳಿದಂತೆ 299 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5 ಜನರನ್ನು ತೀವ್ರ ನಿಗಾ ಘಟಕಗಳಲ್ಲಿರಿಸಲಾಗಿದೆ.

ಕೋವಿಡ್ ನಿಯಂತ್ರಣಕ್ಕೆ ಕೆಲಸದ ಸ್ಥಳಗಳು ಹಾಗೂ ಕಾರ್ಖಾನೆಗಳ ಕುರಿತಂತೆ ಕೇಂದ್ರ ಗೃಹ ಇಲಾಖೆ ಸ್ಪಷ್ಟೀಕರಣ:

ಕೆಲಸದ ಸ್ಥಳಗಳಲ್ಲಿ ಕೋವಿಡ್ ಪ್ರಕರಣಗಳು ವರದಿಯಾದಲ್ಲಿ ಸಂಬಂಧಿತ ಸಂಸ್ಥೆಗಳ ಸಿಇಒ ಗಳನ್ನು ಬಂಧಿಸಲಾಗುತ್ತದೆ ಎಂಬ ಈ ಹಿಂದಿನ‌ ಸುತ್ತೋಲೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಈ ಕುರಿತಂತೆ ಯಾವುದೇ ಅಂಶಗಳು ಇಲ್ಲದ ಕಾರಣ ಆತಂಕದ ಅವಶ್ಯಕತೆಯಿಲ್ಲ ಎಂದು ಕೇಂದ್ರ‌ ಗೃಹ ಇಲಾಖೆಯ ಕಾರ್ಯದರ್ಶಿ ಎಲ್ಲ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಜೆ ಜೆ‌ ನಗರದ ಗಲಭೆಯಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳ ಸ್ಥಳಾಂತರ:

ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 116 ಬಂಧಿತ ಆರೋಪಿಗಳನ್ನು ಮತ್ತು ಈ ಹಿಂದೆ ಜಿಲ್ಲಾ ಕಾರಾಗೃಹದಲ್ಲಿದ್ದ 17 ಬಂಧಿತ ಕೈದಿಗಳನ್ನು ಒಳಗೊಂಡಂತೆ ಒಟ್ಟು 133 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹದಿಂದ ಬೆಂಗಳೂರಿನ ಅಧಿಸೂಚಿತ ನಿರ್ಬಂಧ ಕೇಂದ್ರವಾದ ಹಜ್ ಭವನಕ್ಕೆ‌ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

Last Updated : Apr 24, 2020, 7:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.