ETV Bharat / state

ಆರಾಧನಾ ಯೋಜನೆ ಕಾರ್ಯಕ್ರಮಗಳಿಗಾಗಿ 49.74 ಕೋಟಿ ರೂ. ಅನುದಾನ ಬಿಡುಗಡೆ - aradhana scheme programs

ಆರಾಧನಾ ಯೋಜನೆಗೆ ಮುಜರಾಯಿ ಇಲಾಖೆಯಿಂದ 2022-23ನೇ ಸಾಲಿನ 49.74 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.

49 crore Grant released for aradhana programs
ಆರಾಧನಾ ಕಾರ್ಯಕ್ರಮಗಳಿಗಾಗಿ 49.74 ಕೋಟಿ ರೂ. ಅನುದಾನ ಬಿಡುಗಡೆ
author img

By

Published : Aug 13, 2022, 11:04 PM IST

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ, ಲಂಬಾಣಿ ತಾಂಡಾ, ವಡ್ಡರ ಕೇರಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳು ವಾಸವಿರುವ ಸ್ಥಳಗಳಲ್ಲಿನ ದೇವಾಲಯ, ಪೂಜಾ ಮಂದಿರ, ಹಾಗೂ ಪ್ರಾರ್ಥನಾ ಮಂದಿರಗಳ ದುರಸ್ತಿ, ಜೀರ್ಣೋದ್ಧಾರ ಹಾಗೂ ನವ ನಿರ್ಮಾಣಗಳ ಯೋಜನೆಗೆ ಸಂಬಂಧಿಸಿದ ಆರಾಧನಾ ಯೋಜನೆಗೆ ಮುಜರಾಯಿ ಇಲಾಖೆಯಿಂದ 2022-23ನೇ ಸಾಲಿನಲ್ಲಿ 49.74 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿರುವ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಮಾರ್ಗಸೂಚಿಗಳ ಅನ್ವಯ 2022-23ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ ವಿಧಾನಸಭಾ ಕ್ಷೇತ್ರವಾರು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಜನಸಂಖ್ಯೆ ಆಧಾರದಲ್ಲಿ ಎಸ್‌.ಸಿ.ಪಿ ಯಡಿಯಲ್ಲಿ ರೂ. 19.38 ಕೋಟಿ ಹಾಗೂ ಟಿ.ಎಸ್‌.ಪಿ ಯೋಜನೆಯಡಿ ರೂ. 30.36 ಕೋಟಿ ಸೇರಿ ಒಟ್ಟಾರೆ 49.74 ಕೋಟಿಗಳ ಅನುದಾನವನ್ನು ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯ ಆಧಾರದಲ್ಲಿ 31 ಜಿಲ್ಲೆಗಳಿಗೂ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಅನುದಾನದ ಸದುಪಯೋಗದ ಮೂಲಕ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ.. ಹೀಗಂದ್ರಾ ಸಚಿವ ಮಾಧುಸ್ವಾಮಿ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.