ETV Bharat / state

ಆನೆ ದಂತ ಮಾರಾಟ ಮಾಡುತ್ತಿದ್ದ ಹೊರ ರಾಜ್ಯದ ಐವರು ಆರೋಪಿಗಳ ಬಂಧನ - ತಮಿಳುನಾಡು ಮೂಲದ ಆರೋಪಿಗಳ ಬಂಧನ

ಆನೆ ದಂತ ಮಾರಾಟ ಮಾಡುತ್ತಿದ್ದ ಐದು ಮಂದಿ ಅಂತಾರಾಜ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಎರಡು ಆನೆಗಳ ದಂತ ವಶಕ್ಕೆ ಪಡೆದುಕೊಳ್ಳಲಾಗಿದೆ.

arrest
arrest
author img

By

Published : Nov 7, 2020, 2:51 PM IST

ಬೆಂಗಳೂರು: ತಮಿಳುನಾಡಿನಿಂದ ನಗರಕ್ಕೆ ಬಂದು ಆನೆ ದಂತ ಮಾರಾಟ ಮಾಡುತ್ತಿದ್ದ ಐದು ಮಂದಿ ಅಂತಾರಾಜ್ಯ ಆರೋಪಿಗಳನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಗೋವಿಂದರಾಜು, ರಾಜೇಶ್, ಪ್ರಭಾಕರನ್, ನವೀನ್ ಹಾಗೂ ತಮಿಳುಸೆಲ್ವಂ ಬಂಧಿತ ಆರೋಪಿಗಳು. ಆರೊಪಿಗಳಿಂದ ಎರಡು ಆನೆಗಳ ದಂತ ವಶಕ್ಕೆ ಪಡೆದುಕೊಳ್ಳಲಾಗಿದೆ.

5 arrested for selling elephant ivory
ಬಂಧಿತ ಆರೋಪಿಗಳು

ಸಜ್ಜನ್ ಸರ್ಕಲ್​ನ ಫುಡ್ ಸ್ಟ್ರೀಟ್ ಬಳಿ ಐವರು ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದರ ಕುರಿತು ಸ್ಥಳೀಯರಿಂದ ವಿಷಯ ತಿಳಿದ ಇನ್ಸ್​ಪೆಕ್ಟರ್ ಶಿವಶಂಕರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.‌

ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು,‌ ಹಣ ಸಂಪಾದನೆಗಾಗಿ ಕೃತ್ಯ ಎಸಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಇವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ‌ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.