ETV Bharat / state

ಎಲ್​ಎಸ್​​ಡಿ ಕಾಯಿಲೆ ಚಿಕಿತ್ಸೆಗೆ 5 ಕೋಟಿ ಬಿಡುಗಡೆ: ಹೈಕೋರ್ಟ್​ಗೆ ಸರ್ಕಾರದ ಮಾಹಿತಿ - Government Information to High Court

ಲೈಸೋಸೋಮಲ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲು 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

High Court
ಹೈಕೋರ್ಟ್
author img

By

Published : Feb 12, 2021, 8:19 PM IST

ಬೆಂಗಳೂರು: ಅಪರೂಪದ ಹಾಗೂ ಅನುವಂಶೀಯ ‘ಲೈಸೋಸೋಮಲ್’ (ಎಲ್‌ಎಸ್‌ಡಿ) ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 5 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಈ ಕುರಿತು ಲೈಸೋಸೋಮಲ್ ಸ್ಟೋರೇಜ್ ಡಿಸಾರ್ಡರ್ ಸೊಸೈಟಿ ಆಫ್ ಇಂಡಿಯಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಓದಿ: ಲೋಕಾಯುಕ್ತಕ್ಕೆ ಇಲಾಖಾ ವಿಚಾರಣೆ ನಡೆಸಲು ಅವಕಾಶ ನೀಡಿ ಹೈಕೋರ್ಟ್ ನಿರ್ದೇಶನ

ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಎಲ್​ಎಸ್​ಡಿ ಚಿಕಿತ್ಸೆಗೆ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 5 ಕೋಟಿ ರೂಪಾಯಿ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಸ್ಪತ್ರೆ ಪರ ವಕೀಲರು, ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹಣದಲ್ಲಿ ಈ ವರ್ಷದ ಮಾರ್ಚ್ ಅಂತ್ಯದವರೆಗೆ ಚಿಕಿತ್ಸೆ ನೀಡಲು ಯಾವುದೇ ಸಮಸ್ಯೆ ಇಲ್ಲ ಎಂದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಚಿಕಿತ್ಸೆಗೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯಡಿ ನೆರವು ನೀಡಲು ಇಚ್ಛಿಸಿರುವ ಕಂಪನಿಗಳು, ಸಂಘ-ಸಂಸ್ಥೆಗಳ ಪಟ್ಟಿಯನ್ನು ಸಲ್ಲಿಸುವಂತೆ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಪರ ವಕೀಲರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಮಾ. 8ಕ್ಕೆ ಮುಂದೂಡಿತು. ಸದ್ಯ 45 ರೋಗಿಗಳು ಎಲ್‌ಎಸ್‌ಡಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.