ETV Bharat / state

ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರ ನಿಷೇಧ ಕೋರಿದ 5 ತಿಂಗಳ ಮಗು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

author img

By

Published : Dec 24, 2020, 6:31 PM IST

ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರ ನಿಷೇಧಿಸುವಂತೆ ಕೋರಿ ನಗರದ 5 ತಿಂಗಳ ಮಗುವಿನ ಪರವಾಗಿ ವಕೀಲರಾದ ಅಂಜನ್ ದೇವ್ ನಾರಾಯಣ ಹಾಗೂ ಅನ್ನಪೂರ್ಣ ಸೀತಾರಾಮ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

5-month-old child requested to ban traffic inside Cubbon Park: HC notice to govt
ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರ ನಿಷೇಧಿಸುವಂತೆ ಕೋರಿದ 5 ತಿಂಗಳ ಮಗು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರ ನಿಷೇಧಿಸುವಂತೆ ಕೋರಿ 5 ತಿಂಗಳ ಮಗುವಿನ ಮೂಲಕ ಪಿಐಎಲ್ ಅರ್ಜಿ ಸಲ್ಲಿಸಲಾಗಿದ್ದು, ಈ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪಾರ್ಕ್ ಒಳಗೆ ವಾಹನ ಸಂಚಾರ ನಿಷೇಧಿಸುವಂತೆ ಕೋರಿ ನಗರದ 5 ತಿಂಗಳ ಮಗುವಿನ ಪರವಾಗಿ ವಕೀಲರಾದ ಅಂಜನ್ ದೇವ್ ನಾರಾಯಣ ಹಾಗೂ ಅನ್ನಪೂರ್ಣ ಸೀತಾರಾಮ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಂಚಾರ ವಿಭಾಗದ ಹೆಚ್ಚುವರಿ ನಗರ ಪೊಲೀಸ್ ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ನಗರ ಭೂ ಸಾರಿಗೆ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರ ಮಗುವಿನ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ, ತಾನು ಹಲವು ದಿನಗಳಿಂದ ಪೋಷಕರ ಜೊತೆ ಕಬ್ಬನ್ ಪಾರ್ಕ್​ ವಿಹಾರಕ್ಕೆ ಬರುತ್ತಿದ್ದೇನೆ. ಆದರೆ, ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರದಿಂದಾಗಿ ಕಾರ್ಬನ್ ಪಾರ್ಕ್​ನಲ್ಲಿ ಮೊನಾಕ್ಸೈಡ್​​​ ಹೆಚ್ಚಾಗಿದೆ. ಇದರಿಂದಾಗಿ ತನ್ನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಾಗೆಯೇ ಮಾಲಿನ್ಯ ರಹಿತ ವಾತಾವರಣದಲ್ಲಿ ಆರೋಗ್ಯಯುತವಾಗಿ ಜೀವಿಸುವ ತನ್ನ ಸಂವಿಧಾನಬದ್ಧ ಹಕ್ಕು ಉಲ್ಲಂಘನೆಯಾಗುತ್ತಿದೆ. ಹೀಗಾಗಿ ಪಾರ್ಕ್ ಒಳಗೆ ವಾಹನ ಸಂಚಾರ ನಿಷೇಧಿಸಲು ಸರ್ಕಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ಮನವಿ ಮಾಡಲಾಗಿದೆ.

ಲಾಕ್​ಡೌನ್ ಸಂದರ್ಭದಲ್ಲಿ ಪಾರ್ಕ್ ಒಳಗೆ ವಾಹನ ಸಂಚಾರವನ್ನು ಸರ್ಕಾರ ನಿಷೇಧಿಸಿತ್ತು. ಅನ್​ಲಾಕ್ ಪ್ರಕ್ರಿಯೆ ಆರಂಭವಾದ ಬಳಿಕ ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ವಾಹನ ಸಂಚಾರ ನಿರ್ಬಂಧಿಸಿದ್ದ ವೇಳೆ ಪಾರ್ಕ್ ಒಳಗೆ ಧೂಳು ಹಾಗೂ ಹೊಗೆ ಕಡಿಮೆಯಾಗಿ ಗಿಡಮರಗಳು ಸ್ವಚ್ಛವಾಗಿ ಹೊಳೆಯುತ್ತಿದ್ದವು. ಜೊತೆಗೆ ಪಾರ್ಕ್ ಒಳಗಿನ ವಾತಾವರಣ ಚೇತರಿಕೆ ಕಂಡಿತ್ತು. ಹೀಗಾಗಿ ಪಾರ್ಕ್ ಒಳಗೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು ಎಂಬುದು ಅರ್ಜಿದಾರ ಮಗುವಿನ ಕೋರಿಕೆ.

ಈ ಹಿಂದೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಪಾರ್ಕ್ ಒಳಗೆ ವಾಹನಗಳ ಸಂಚಾರ ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ, ಅಕ್ಟೋಬರ್ 22ರಂದು ಅರ್ಜಿದಾರರ ಕೋರಿಕೆ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.